ಯಾದಗಿರಿ | ಹಳೆಯ ವೈಷಮ್ಯ ಹಿನ್ನೆಲೆ : ನಗರಸಭೆ ಮಾಜಿ ಅಧ್ಯಕ್ಷೆ ಅಂಜಲಿ ಕಾಂಬಾನೂರರ ಹತ್ಯೆಗೆ ಯತ್ನ

Date:

ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷೆ ಅಂಜಲಿ ಗಿರೀಶ ಕಾಂಬಾನೂರರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಬುಧವಾರ ಬೆಳಿಗ್ಗೆ ಚಿತ್ತಾಪುರ ರಸ್ತೆಯ ಗ್ರೀನ್‌ಸಿಟಿ ಸಮೀಪ ನಡೆದಿದೆ.

- Advertisement -

ಹರಿತವಾದ ಆಯುಧಗಳಿಂದ ನಡೆದ ದಾಳಿಯಲ್ಲಿ ಅಂಜಲಿ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ಅಜೀಮಿರ್ ತಕ್ಷಣ ಅವರನ್ನು ಯಾದಗಿರಿಯ ಯಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಕಲಬುರಗಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಅಂಜಲಿ ಕಾಂಬಾನೂರ ಅವರು ದಲಿತ ದೌರ್ಜನ್ಯ ಕಾಯ್ದೆಯಡಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ಸೇವೆಗೆ ಸೇರಿ ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ತೆರಳುವ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಬ್ರಾಹ್ಮಣ್ಯವಾದಿ ಶಕ್ತಿಗಳು ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿವೆ ; ಚಂದ್ರಕಾಂತ ಬಜೇರಿ

ಕೆಲವು ವರ್ಷಗಳ ಹಿಂದೆ ಅವರ ಪತಿ ಗಿರೀಶ ಕಾಂಬಾನೂರರ ಹತ್ಯೆ ಶಹಾಬಾದ್‌ನಲ್ಲಿ ನಡೆದಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದ ಹಳೆಯ ವೈಷಮ್ಯವೇ ಈ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...