ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಅದಕ್ಕಿಂತ ಭಾಗವಹಿಸುವಿಕೆ ಮುಖ್ಯ ಎಂದು ವಿಶ್ವ ಸಮಾನತೆ ಫೌಂಡೇಶನ್ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ಕುಮಾರ್ ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಮತ್ತು ವಿಶ್ವ ಸಮಾನತೆ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ವಲಯ ಮಟ್ಟದ ಕ್ರೀಡಾಕೂಟ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಂದಿನ ಯುವಕರಲ್ಲಿ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಈ ಮನೋಭಾವವನ್ನು ಹೋಗಲಾಡಿಸಲು ವಿಶ್ವ ಸಮಾನತೆ ಫೌಂಡೇಶನ್ ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಹೆಚ್ಚು ಮಾಡುವುದಕ್ಕೆ ಈ ರೀತಿಯ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲಿ ಆಯೋಜನೆ ಮಾಡುತ್ತಿದೆ. ಕ್ರೀಡೆ ನಮ್ಮ ಚೇತನ ಮತ್ತು ಜಾಗೃತಿಯನ್ನು ತೋರಿಸುತ್ತದೆ. ಪ್ರತಿಯೊಬ್ಬರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಜವಬ್ದಾರಿ ಶಿಕ್ಷರಲ್ಲಿರುತ್ತದೆ. ಪ್ರತಿಭೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಹೆಚ್ಚಿನ ತರಬೇತಿ ನೀಡಿ ಅಂತಾರಾಷ್ಟ್ರೀಯ ಮಟ್ಟದವರೆಗೆ ಬೆಳೆಯಲು ಸಹಾಯ ಮಾಡಬೇಕು” ಎಂದರು.
ಬಳಿಕ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ ವಿಜೇತರಾದ ಮಕ್ಕಳಿಗೆ ಫೌಂಡೇಶನ್ ವತಿಯಿಂದ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ?: ಯಾದಗಿರಿ | ಅಂಬೇಡ್ಕರ್ ಮೂರ್ತಿಗೆ ಹಾನಿ ಮಾಡಿದ ಆರೋಪಿ ಎನ್ಕೌಂಟರ್‌ಗೆ ಗಿರೀಶ್ ಚಟ್ಟೇರಕರ್ ಆಗ್ರಹ
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮಹ್ಮದ್ ಅಬ್ದುಲ್ಲಾ, ಮಕ್ಕಳ ಕಲ್ಯಾಣ ಅಧಿಕಾರಿ ಭೀಮಾ ಶಂಕರ್, ಉಪನ್ಯಾಸಕ ಮಲ್ಲಿಕಾರ್ಜುನ, ವೈದ್ಯಾಧಿಕಾರಿ ಮಾರುತಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.