ಯಾದಗಿರಿ |‌ ರೈತ ಮುಖಂಡ ಚನ್ನಪ್ಪ ಆನೆಗುಂದಿ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

Date:

ನಕಲಿ ಬೀಜ, ರಬ್ಬಗೊಬ್ಬರ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಕುರಿತು ಗಮನ ಸೆಳೆದ ಯಾದಗಿರಿ ಜಿಲ್ಲೆಯ ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರ ಮೇಲೆ ಸುಳ್ಳು ಕೇಸ್‌ ದಾಖಲಿಸಿದನ್ನು ಖಂಡಿಸಿ ಶಹಾಪುರ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

- Advertisement -

ಸಂಯುಕ್ತ ರೈತ ಹೋರಾಟ ಸಮಿತಿ ನೇತ್ರತ್ವದಲ್ಲಿ ನಗರದ ಚರಬಸವೇಶ್ವರ ಕಮಾನ್‌ದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಬಸವೇಶ್ವರ ವೃತ್ತದಲ್ಲಿ ರೈತ ಮುಖಂಡರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಉಮಾಕಾಂತ ಅಳ್ಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...
WhatsApp Image 2025 06 06 at 10.32.49 PM
ರೈತ ಮುಖಂಡರು ಮಾತನಾಡಿದರು.

ʼಜಿಲ್ಲಾ ಕೃಷಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಭೀಮರಾಯನಗುಡಿ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ಮುಂಗಾರು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ ರೈತ ಮುಖಂಡ ಚೆನ್ನಪ್ಪ ಆನೆಗುಂದಿ ಅವರು ಕಳಪೆ ಬೀಜ, ನಕಲಿ ರಬ್ಬಗೊಬ್ಬರ ಹಾಗೂ ಕಾಳ ಸಂತೆ ಮಾರಾಟ ಕುರಿತು ಗಮನ ಸೆಳೆದಿದ್ದರು. ಅದಕ್ಕೆ ಕೃಷಿ ಪರಿಕರಣಗಳ ಮಾರಾಟಗಾರರ ಸಂಘದ ಪದಾಧಿಕಾರಿಗಳು ಚೆನ್ನಪ್ಪ ಆನೆಗುಂದಿ ಹಾಗೂ ಇತರ ರೈತ ಮುಖಂಡರ ಮೇಲೆ ಹಲ್ಲೆ ನಡೆಸಿದ್ದಾರೆ. ಚನ್ನಪ್ಪ ಆನೆಗುಂದಿ ಅವರ ಮೇಲೆ ದೂರು ದಾಖಲಿಸಿದ್ದು ಖಂಡನೀಯʼ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಯುಕ್ತ ರೈತ ಹೋರಾಟ ಸಮಿತಿಯ ಮುಖಂಡರಾದ ನರಸಿಂಹ ನಾಯಕ ರಾಯಚೂರು, ಕೆ.ನೀಲಾ ಕಲಬುರಗಿ, ದವಲ್‌ಸಾಬ್ ನದಾಫ್‌, ಮಲ್ಲಿಕಾರ್ಜುನ ಸತ್ಯಂಪೇಟೆ, ಶರಣಬಸಪ್ಪ ಮಮಶೆಟ್ಟಿ, ನಾಗರತ್ನಮ್ಮ ಪಾಟೀಲ್‌, ಶರಣು ಮಂದರವಾಡ, ನಾಗಣ್ಣ ಬಡಗೇರ್‌, ಹೊನ್ನಪ್ಪ ಗಂಗನಾಳ, ಮಹಾದೇವಿ ಬೆನಮಠ, ಲವಿತ್ರ ವಸ್ತ್ರದ್ ಅವರು ಮಾತನಾಡಿ, ʼರೈತರಿಗೆ ರಿಯಾಯಿತಿ ದರದಲ್ಲಿ ಬೀಜ, ರಸಗೊಬ್ಬರ ವಿತರಿಸಬೇಕು. ಆದರೆ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ವಿತರಿಸುವ ಕುರಿತು ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರು ರೈತರ ಪರವಾಗಿ ಮಾತನಾಡಿದ್ದು ಸರಿಯಾಗಿಯೇ ಇದೆ. ಅದನ್ನೇ ನೆಪ ಮಾಡಿಕೊಂಡ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಮುಖಂಡರು ರೈತ ಹೋರಾಟ ಹತ್ತಿಕ್ಕುವ ಹುನ್ನಾರದಿಂದ ಚನ್ನಪ್ಪ ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರೈತ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ಕೂಡಲೇ ಈ ಪ್ರಕರಣ ವಾಪಸ್‌ ಪಡೆಯಬೇಕುʼ ಎಂದು ಒತ್ತಾಯಿಸಿದರು.

ʼರೈತರಿಗೆ ಕೃತಕ ಅಭಾವ ಸೃಷ್ಟಿಸದೆ ಸಮರ್ಪಕವಾಗಿ ಬೀಜ ಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರದಿಂದ ವಿತರಿಸಬೇಕು. ಕೃಷಿ ಪರಿಕರ ವಿತರಕರಿಗೆ ಮಾತ್ರ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಿ ರೈತರಿಗೆ ಹಾಗೂ ಕೃಷಿ ಪರಿಕರ ವಿತರಕರ ನಡುವೆ ಗೊಂದಲ ಸೃಷ್ಟಿಸಿದ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರೈತ ಮುಖಂಡ ಚನ್ನಪ್ಪ ಆನೆಗುಂದಿ ಅವರ ಮೇಲೆ ದಾಖಲಾದ ಪ್ರಕರಣಕ್ಕೆ ಪ್ರತಿ ದೂರು ದಾಖಲು ಮಾಡದ ಭೀಮರಾಯನಗುಡಿ ಪಿಎಸ್‌ಐ ಮಹಾಂತೇಶ ಪಾಟೀಲ್‌ ಅವರನ್ನು ಅಮಾನತು ಮಾಡಬೇಕುʼ ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

WhatsApp Image 2025 06 06 at 10.32.48 PM
ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರ ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಆರ್‌ಜಿಕರ್‌ ಆಸ್ಪತ್ರೆ, ಅಣ್ಣಾ ವಿ ವಿ ರೀತಿ ಎಲ್ಲ ಅತ್ಯಾಚಾರ ಪ್ರಕರಣಗಳಲ್ಲೂ ತ್ವರಿತ ನ್ಯಾಯದಾನ ಅತ್ಯಗತ್ಯ

ಪ್ರಮುಖರಾದ ಟಿ.ಯಶವಂತ, ಮಹೇಶಗೌಡ ಸುಭೇದಾರ್‌, ಮಲ್ಲಣಗೌಡ ಪರಿವಾಣ, ಎಸ್‌.ಎಂ.ಸಾಗರ್‌, ದೇವೆಂದ್ರಪ್ಪಗೌಡ, ಅಶೋಕ ಸಾಹು ಬಲಕಲ್‌, ಚನ್ನಾರೆಡ್ಡಿ ಪಾಟೀಲ್‌, ಬಸವರಾಜ ದೊರೆ, ಧರ್ಮಣ್ಣ ತಹಶೀಲ್ದಾರ್‌, ಜೈಲಾಲ್‌ ತೋಟದಮನಿ, ದೇವೆಂದ್ರಪ್ಪ ಕೋಲಾರ್‌, ಮಲ್ಲಣ ಚಿಂತಿ, ಅನಿತಾ ಹಿರೇಮಠ, ಪ್ರಭಾಕರರೆಡ್ಡಿ, ರಾಮಯ್ಯ ಭೋವಿ, ಭೀಮಣ್ಣ ಶಹಾಪುರ, ಸಿದ್ದು ಮುಂಡಾಸ, ಮಲ್ಲಣಗೌಡ ನಗನೂರು, ಧರ್ಮಣ್ಣ ದೊರೆ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ, ಕೃಷಿ ಕೂಲಿಕಾರ್ಮಿಕರ ಸಂಘಟನೆ, ಪ್ರಾಂತ ರೈತ ಸಂಘಟನೆ ಮುಖಂಡರು, ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...