ಯಾದಗಿರಿ | ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಎಲ್‌ಇಡಿ, ಮ್ಯೂಸಿಯಂ ಲೈಟ್ ಅಳವಡಿಸಲು ಮನವಿ

Date:

ಸುರಪುರ ನಗರಸಭೆ ವ್ಯಾಪ್ತಿಯ ಪೆಟ್ರೋಲ್ ಪಂಪ್ ಬಳಿ ಇರುವ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಪ್ರತಿದಿನ ಎಲ್‌ಇಡಿ ಮತ್ತು ಮ್ಯೂಸಿಯಂ ಲೈಟ್ ಅಳವಡಿಸಬೇಕೆಂದು ಸುರಪುರ ತಾಲೂಕು ಸಗರನಾಡು ಎಲೆಕ್ಟ್ರಿಕಲ್ ಕಾರ್ಮಿಕ ಸಂಘದ ಪದಾಧಿಕಾರಿಗಳು ನಗರಸಭೆ ಪೌರಾಯುಕ್ತರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

- Advertisement -

ʼ1857ರ ಪ್ರಥಮ ಸ್ವಾತಂತ್ರ್ಯ ಹೋರಾಟದ ನಾಯಕ ಮತ್ತು ಸುರಪುರ ಸಂಸ್ಥಾನದ ಗೌರವದ ಪ್ರತಿರೂಪವಾದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕರ ಚೌಕ್ ನಗರದ ಐತಿಹಾಸಿಕ ಸ್ಮಾರಕಗಳಲ್ಲಿ ಒಂದಾಗಿದೆ. ಆದರೆ, ಇಲ್ಲಿ ಸರಿಯಾದ ಬೆಳಕು ವ್ಯವಸ್ಥೆ ಇಲ್ಲದ ಕಾರಣ ರಾತ್ರಿ ವೇಳೆ ವಾಹನ ಸಂಚಾರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆʼ ಎಂದು ಸಂಘಟನೆ ಮುಖಂಡರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಗರದ ಪ್ರಮುಖ ವೃತ್ತವಾಗಿರುವ ಈ ಪ್ರದೇಶದಲ್ಲಿ ಎಲ್‌ಇಡಿ ಲೈಟ್ ಮತ್ತು ಮ್ಯೂಸಿಯಂ ಲೈಟ್ ಅಳವಡಿಸಿದರೆ ಚೌಕ್ ಪ್ರದೇಶದ ಸೌಂದರ್ಯ ಹೆಚ್ಚುವುದರೊಂದಿಗೆ ಸುರಕ್ಷತೆ ಕೂಡ ಬಲವಾಗಲಿದೆ. ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ನಿರ್ಮಿಸಲಾದ ಸ್ಥಳಕ್ಕೆ ಗೌರವ ಕಾಪಾಡುವ ಉದ್ದೇಶದಿಂದಲೇ ಬೆಳಕು ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಬೀದರ್‌ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್‌ ಬೆದರಿಕೆ : ತೀವ್ರ ತಪಾಸಣೆ

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮದನಶಾ, ಉಪಾಧ್ಯಕ್ಷ ತಿಪ್ಪಣ್ಣ ಮಡಿವಾಳ, ಪ್ರಧಾನ ಕಾರ್ಯದರ್ಶಿ ಆನಂದ ಕಟ್ಟಿಮನಿ, ಅಧ್ಯಕ್ಷ ಅಬ್ದುಲ್ ರೌಫ್, ಖಜಾಂಚಿ ಅಮಜಾದ್ ಹುಸೇನ್, ಸಂಘಟನಾ ಕಾರ್ಯದರ್ಶಿ ಅಬೀದ್ ಪಗಡಿ, ರಿಯಾಜ್ ಅಹ್ಮದ್ ಸೇರಿದಂತೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...