ಯಾದಗಿರಿ | ಆರ್‌ಎಸ್‌ಎಸ್‌ಗೆ ಹಿನ್ನಡೆ; ಸೆಡ್ಡು ಹೊಡೆದ ದಲಿತ ಸಂಘಟನೆಗಳು

Date:

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಆಯೋಜಿಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಭಾರೀ ಹಿನ್ನಡೆಯಾದ ಬೆನ್ನಲ್ಲೇ, ಯಾದಗಿರಿ ಜಿಲ್ಲೆಯಲ್ಲಿಯೂ ಆರ್‌ಎಸ್‌ಎಸ್‌ ಹಿನ್ನಡೆ ಅನುಭವಿಸಿದೆ. ಆರ್‌ಎಸ್‌ಎಸ್‌ನ ಪಥಸಂಚಲನಕ್ಕೆ ದಲಿತ ಸಂಘಟನೆಗಳು ಸೆಡ್ಡು ಹೊಡೆದಿದ್ದು, ಸಂಘಪರಿವಾರ ತಿಣಕಡುತ್ತಿದೆ.

- Advertisement -

ಯಾದಗಿರಿ ಜಿಲ್ಲೆಯ ಕೆಂಬಾವಿಯಲ್ಲಿ ನವೆಂಬರ್ 4ರಂದು ಪಥಸಂಚಲನ ನಡೆಸಲು ಉದ್ದೇಶಿಸಿತ್ತು. ಅನುಮತಿ ಕೋರಿ ತಾಲೂಕು ಆಡಳಿತಕ್ಕೆ ಅರ್ಜಿ ಸಲ್ಲಿಸಿತ್ತು. ಈ ಬೆನ್ನಲ್ಲೇ, ದಲಿತ ಸಂಘಟನೆಗಳು ಕೂಡ ತಮಗೂ ಅದೇ ದಿನ ಪಥಸಂಚಲನ ನಡೆಸಲು ಅನುಮತಿ ಬೇಕೆಂದು ಅರ್ಜಿ ಸಲ್ಲಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪರಿಣಾಮವಾಗಿ, ತಾಲೂಕು ಆಡಳಿತವು ಆರ್‌ಎಸ್‌ಎಸ್‌ಗೆ ಅನುಮತಿ ನೀಡಲು ಹಿಂದೇಟು ಹಾಕಿದೆ. ಮಾತ್ರವಲ್ಲದೆ, ತಾಲೂಕು ಆಡಳಿತ ‘ಶಾಂತಿ ಸಂದಾನ ಸಭೆ’ ನಡೆಸಿದೆ. ಆದರೆ, ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಯಶಸ್ವಿಯಾಗಿಲ್ಲ.

ಈ ಲೇಖನ ಓದಿದ್ದೀರಾ?: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ: ನ. 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ಹಿನ್ನಡೆ

ಆರ್‌ಎಸ್‌ಎಸ್‌ ಒಂದು ನೋಂದಣಿಯಾಗದ ಸಂಸ್ಥೆ. ಅದು ದಂಡ ಹಿಡಿದು ಜನರಲ್ಲಿ ಭಯ ಮೂಡಿಸುತ್ತಿದೆ. ದಂಡ ಹಿಡಿದು ಪಧಸಂಚಲನ ನಡೆಸಲು ಅವಕಾಶ ಕೊಡಬಾರದು. ಅನುಮತಿ ಕೊಡುವುದೇ ಆದರೆ, ನಮಗೂ ಸಂವಿಧಾನ ಪೀಠಿಕೆ ಹಿಡಿದು ಜಾಥಾ ನಡೆಸಲು ಅವಕಾಶ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಆದಾಗ್ಯೂ, ತನ್ನ ಸಮವಸ್ತ್ರ ಧರಿಸಿ ಪಥಸಂಚಲನ ನಡೆಸಲು ದಂಡವೂ ಮುಖ್ಯ. ಅದನ್ನು ಬಿಟ್ಟು ಪಥಸಂಚಲನ ಮಾಡಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಹೀಗಾಗಿ, ಶಾಂತಿ ಸಭೆ ವಿಫಲವಾಗಿದೆ. ಈ ಬಗ್ಗೆ ತಾಲೂಕು ಆಡಳಿತವು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...