ಯಾದಗಿರಿ | ಎಸ್‌ಐಆರ್: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರ ಮತಹಕ್ಕು ಕಸಿಯುವ ಸಂಚು ಎಂದು ಆರೋಪ

Date:

ಎಸ್‌ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.

- Advertisement -

ಜಾಥಾವು ಬೈಕ್ ರ‍್ಯಾಲಿಯ ಮೂಲಕ ಗಾಂಧಿ ಚೌಕ್ ತಲುಪಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿತು. ಬಳಿಕ ಎಸ್‌ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಲಾಯಿತು. ನಂತರ ಗಾಂಧಿ ವೃತ್ತದಲ್ಲಿ ಬಹಿರಂಗ ಸಭೆ ಆಯೋಜಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಭೆಗೆ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
IMG 20260616 WA0014

ಸಭೆಯಲ್ಲಿ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕರಾದ ಮರೆಪ್ಪ ಚಟ್ಟೇಕರ್, ಇರ್ಪಾನ್ ಬದಾಲ್ ಮಲ್ಲಿಕಾರ್ಜುನ ಸತ್ಯಂಪೇಟ ಸೇರಿದಂತೆ ಹಲವು ಮುಖಂಡರು ಮಾತನಾಡಿ, ‘ಎಸ್‌ಐಆರ್ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಜನಸಾಮಾನ್ಯರ ಮತದಾನದ ಹಕ್ಕಿಗೆ ಧಕ್ಕೆ ಉಂಟುಮಾಡುವ ಪ್ರಯತ್ನವಾಗಿದೆ’ ಎಂದು ಆರೋಪಿಸಿದರು.

ಈ ವೇಳೆ ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿ ಮಾಯಾ ಮಾತನಾಡಿ, “ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಹರಿಸುವ ಬದಲು ಎಸ್‌ಐಆರ್‌ನಂತಹ ಕ್ರಮಗಳ ಮೂಲಕ ನಮ್ಮ ಅಸ್ತಿತ್ವವನ್ನೇ ಪ್ರಶ್ನಿಸುವ ಕೆಲಸ ಮಾಡುತ್ತಿದೆ. ನಾವು ಲಿಂಗತ್ವ ಅಲ್ಪಸಂಖ್ಯಾತರಾಗಿರುವ ಕಾರಣ ಜೀವನದಲ್ಲಿ ಹೆಸರು, ಲಿಂಗ, ವಾಸಸ್ಥಳ, ರಾಜ್ಯ ಸೇರಿದಂತೆ ಅನೇಕ ಬದಲಾವಣೆಗಳನ್ನು ಎದುರಿಸುತ್ತೇವೆ. ಹಲವರನ್ನು ಕುಟುಂಬವೇ ತಿರಸ್ಕರಿಸಿ ಮನೆಯಿಂದ ಹೊರಹಾಕಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಕೇಳುತ್ತಿರುವ ದಾಖಲೆಗಳನ್ನು ನಾವು ಹೇಗೆ ಒದಗಿಸಬೇಕು?” ಎಂದು ಪ್ರಶ್ನಿಸಿದರು.

“2014ರಲ್ಲಿ ನಮಗೆ ಮತದಾನದ ಹಕ್ಕು ದೊರೆತಿದ್ದು, ದೇಶದ ನಾಗರಿಕರೆಂದು ಮಾನ್ಯತೆ ಸಿಕ್ಕಿದೆ. ಈಗ ದಾಖಲೆಗಳ ನೆಪದಲ್ಲಿ ನಮ್ಮ ಮತಹಕ್ಕನ್ನು ಕಸಿದುಕೊಳ್ಳಲು ಪ್ರಯತ್ನಿಸಿದರೆ ಅದು ನಮ್ಮ ನಾಗರಿಕತ್ವವನ್ನೇ ಪ್ರಶ್ನಿಸುವಂತಾಗುತ್ತದೆ. ಎಸ್‌ಐಆರ್ ಮೂಲಕ ಲಿಂಗತ್ವ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಹುನ್ನಾರ ನಡೆಯುತ್ತಿದೆ” ಎಂದು ಅವರು ಆರೋಪಿಸಿದರು.

ಎದ್ದೇಳು ಕರ್ನಾಟಕ ಸಂಘಟನೆಯ ಪ್ರತಿನಿಧಿ ಚನ್ನಮ್ಮ ಮಾತನಾಡಿ, “ಎಸ್‌ಐಆರ್ ಪರಿಷ್ಕರಣೆಯಲ್ಲಿ ಮಹಿಳೆಯರೇ ಹೆಚ್ಚಾಗಿ ತೊಂದರೆ ಅನುಭವಿಸುತ್ತಿದ್ದಾರೆ. ತಂದೆ-ತಾಯಿಯ ಮನೆಯಲ್ಲಿ ಒಂದು ಹೆಸರು, ವಿವಾಹದ ನಂತರ ಮತ್ತೊಂದು ಹೆಸರು ಬಳಸುವ ಸಂದರ್ಭಗಳು ಹೆಚ್ಚಾಗಿವೆ. ಕೆಲವೊಮ್ಮೆ ಜಾತಕ ಅಥವಾ ಕುಟುಂಬದ ಸಂಪ್ರದಾಯದ ಕಾರಣಕ್ಕೂ ಹೆಸರು ಬದಲಾಗಿರುತ್ತದೆ. ಇದರಿಂದ ದಾಖಲೆಗಳಲ್ಲಿ ವ್ಯತ್ಯಾಸ ಉಂಟಾಗಿ ಮಹಿಳೆಯರ ಹೆಸರು ಮತಪಟ್ಟಿಯಿಂದ ಕೈಬಿಡುವ ಅಪಾಯ ಎದುರಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

IMG 20260616 WA0011

“ಆದ್ದರಿಂದ ಮಹಿಳೆಯರು ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಜಾಗೃತರಾಗಬೇಕು. ಮತದಾನದ ಹಕ್ಕು ಕಳೆದುಕೊಂಡರೆ ಪ್ರಜಾಪ್ರಭುತ್ವದ ಹಕ್ಕುಗಳ ಜೊತೆಗೆ ಸರ್ಕಾರದ ವಿವಿಧ ಸೌಲಭ್ಯಗಳಿಂದಲೂ ವಂಚಿತರಾಗುವ ಸಾಧ್ಯತೆ ಇದೆ. ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಅಪಾಯವನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದರು.

ಬಳಿಕ ಜಾಥಾವು ಅಂಬೇಡ್ಕರ್ ವೃತ್ತ ತಲುಪಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿತು. ಅಲ್ಲದೆ ಎಸ್‌ಐಆರ್ ಕುರಿತು ಮಾಹಿತಿಯಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚಿ ಜಾಗೃತಿ ಮೂಡಿಸಲಾಯಿತು. ನಂತರ ನಗರದ ಸುಭಾಷ್ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮತ್ತು ಮುಖಂಡರು ಜನಸಾಮಾನ್ಯರಿಗೆ ಎಸ್‌ಐಆರ್‌ನಿಂದ ಆಗಬಹುದಾದ ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಇದನ್ನು ಓದಿದ್ದೀರಾ? ಶಹಾಪುರದಲ್ಲಿ ಎಸ್‌ಐಆರ್ ವಿರೋಧಿ ಹೋರಾಟದ ಕಹಳೆ; ಬೈಕ್ ರ‍್ಯಾಲಿ ಮೂಲಕ ಜನಜಾಗೃತಿ

ಈ ಸಂದರ್ಭದಲ್ಲಿ ಜೆ.ಎಂ. ವೀರಸಂಗಯ್ಯ ಮಾತನಾಡಿ, ಮತದಾರರ ಹಕ್ಕುಗಳ ರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕರೂ ಎಚ್ಚರಿಕೆಯಿಂದ ಇರಬೇಕು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ನಿಕಟವಾಗಿ ಗಮನಿಸಬೇಕು ಎಂದು ಕರೆ ನೀಡಿದರು. ಸಭೆಯ ನಂತರ ಜಾಥಾವನ್ನು ಮುಂದಿನ ಗಮ್ಯಸ್ಥಾನದತ್ತ ಕಳುಹಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...