ಯಾದಗಿರಿ | ಸತ್ಯ, ನ್ಯಾಯದ ಪರ ನಿಲ್ಲುವುದೇ ನಿಜವಾದ ಧರ್ಮ

Date:

Advertisements

ಯಾದಗಿರಿ ನಗರದ ಈಡನ್ ಗಾರ್ಡನ್ ಸಭಾಗಂಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ‘ನ್ಯಾಯದ ಹರಿಕಾರ ಪೈಗಂಬ‌ರ್ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಸೀರತ್‌ ಪ್ರವಚನ ಅಭಿಯಾನದ ಕಾರ್ಯಕ್ರಮ ನಡೆಯಿತು.

ಲಾಲಾ ಹುಸೇನ್ ಕಂದಗಲ್ ಅವರು ಉಪನ್ಯಾಸ ನೀಡಿ, ‘ನ್ಯಾಯವೇ ಸಮಾಜದ ಶ್ರೇಯೋಭಿವೃದ್ಧಿಗೆ ಮೂಲಸ್ತಂಭ. ಸತ್ಯದ ಪರ ನಿಲ್ಲುವುದೇ ನಿಜವಾದ ಧರ್ಮ’ ಎಂದು ಹೇಳಿದರು.

ʼನ್ಯಾಯವಿಲ್ಲದ ಸಮಾಜ ಅರಾಜಕತೆಗೆ ಕೊಂಡೊಯ್ಯುತ್ತದೆ. ನ್ಯಾಯದ ವಿಚಾರದಲ್ಲಿ ಸತ್ಯವೇ ಶ್ರೇಷ್ಠವಾದದ್ದೆಂದು ಇಸ್ಲಾಂ ಧರ್ಮ ಪ್ರತಿಪಾದಿಸುತ್ತೆ. ಸತ್ಯದ ಪರ ನಿಲ್ಲುವುದು ಮಕ್ಕಳ ಕರ್ತವ್ಯ. ಜಾತಿಯನ್ನು ಪ್ರೀತಿಸಿದರೆ ಯಾರೂ ನಿನ್ನೊಡನೆ ಬರುವುದಿಲ್ಲ. ಮನುಷ್ಯನನ್ನು ಪ್ರೀತಿಸಿದರೆ ಎಲ್ಲರೂ ನಿನ್ನೊಡನೆ ಇರುತ್ತಾರೆಂದು ಮಹಮ್ಮದ್ ಪೈಗಂಬರ್ ಹೇಳಿದ್ದಾರೆ. ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದು ತಿಳಿಸಿದರು.

WhatsApp Image 2025 09 13 at 9.01.59 PM

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಾಹಿಸಿದ ಖಾಸಾ ಮಠ ಗುರಮಿಠಕಲ್ ಶಾಂತವೀರ ಗುರು ಮುರಘರಾಜೇಂದ್ರ ಮಹಾಸ್ವಾಮಿಗಳು ಮಾತನಾಡಿ, ‘ಧಾರ್ಮಿಕ ಸೌಹಾರ್ದ ಹಾಗೂ ನೈತಿಕ ಮೌಲ್ಯಗಳನ್ನು ಉಳಿಸಬೇಕು’ ಎಂದು ಕರೆ ನೀಡಿದರು.

ಇದನ್ನೂ ಓದಿ : ಬೀದರ್‌ | ಶಿಷ್ಟಾಚಾರ ಉಲ್ಲಂಘನೆ ಆರೋಪ : ವೇದಿಕೆಯಲ್ಲೇ ಪ್ರತಿಭಟಿಸಿದ ʼಕೈʼ ಕಾರ್ಯಕರ್ತರು

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಲಲಿತಾ ಎಂ.ಅನಪೂರ, ಜಮಾಅತೆ ಇಸ್ಲಾಮಿ ಹಿಂದ್ ಸ್ಥನೀಯ ಅಧ್ಯಕ್ಷ ಜನಾಬ್ ಸಲಾಹುದ್ದೀನ್ ಜಾಗೀರದಾರ, ಜಮಾಅತೆ ಇಸ್ಲಾಮಿ ಹಿಂದ್ ಯಾದಗಿರಿ ಜಿಲ್ಲಾ ಸಂಚಾಲಕ ಜನಾಬ್ ಅಮ್ಮದ್ ಹುಸೇನ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಚನ್ನಪ್ಪಗೌಡ ಮೊಸಂಬಿ, ತಂಜಿಮುಲ್ ಮುಸ್ಲಿಮಿನಲ್ ಬೈತುಲ್ ಮಾಲ್ ಅಧ್ಯಕ್ಷ ಜನಾಬ್ ಗುಲಾಮ ಸಮದಾನಿ ಮೂಸಾ, ಕರ್ನಾಟಕ ರಾಜ್ಯ ಸಂಶೋಧನಾ ಸಂಶೋಧಕ ಪರಿಷತ್ ಜಿಲ್ಲಾಧ್ಯಕ್ಷ ಗುಂಡಪ್ಪ ಕಲಬುರಗಿ, ದಸಂಸ ಮುಖಂಡ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X