ಯಾದಗಿರಿ | ಬಸ್‌ ನಿಲ್ದಾಣವಿಲ್ಲದೇ ಬಿಸಿಲಲ್ಲಿ ಕಾಯುವ ಪ್ರಯಾಣಿಕರ ಗೋಳು ಕೇಳುವವರಾರು

Date:

ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ ಸಾರ್ವಜನಿಕರು ಸಾರಿಗೆ ಬಳಸುವ ಸ್ಥಳೀಯರು ಕಂಗಾಲಾಗಿದ್ದಾರೆ.

- Advertisement -

ಯಾದಗಿರಿ ಜಿಲ್ಲಾ ಕೇಂದ್ರದಿಂದ ಅಬ್ಬೆತುಮಕುರು ಗ್ರಾಮ ಆರು ಕಿ.ಮೀ ಅಂತರದಲ್ಲಿದೆ. ಆದರೇ ಈ ಗ್ರಾಮದಲ್ಲಿ ಒಂದು ಬಸ್‌ ತಂಗುದಾಣವಿಲ್ಲದೇ ಬಸ್‌ಗಾಗಿ ಕಾಯುವ ಗ್ರಾಮಸ್ಥರು ಬೇಸಿಗೆಯಲ್ಲಿ ನೆರಳಿಲ್ಲದೇ ಒದ್ದಾಡುವ ಸ್ಥಿತಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಊರಿಂದ ಬೇರೆ ಊರಿಗೆ ತೆರಳುವ ದಿನನಿತ್ಯದ ಪ್ರಯಾಣಿಕರು, ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಮಹಿಳೆಯರು, ಸಣ್ಣ ಮಕ್ಕಳು, ಗರ್ಭಿಣಿಯರು, ರೋಗಿಗಳು ಸರಿಯಾದ ಬಸ್ ನಿಲ್ದಾನ ವಿಲ್ಲದೇ ಬಿಸಿಲಲ್ಲೇ ಬಸ್‌ಗಾಗಿ ಕಾಯಬೇಕಿದೆ. ಪ್ರಯಾಣಿಕರು ಬಿರು ಬಿಸಿಲಿನ ಬೇಗೆಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳವುದಕ್ಕೆ ಆಗದೇ, ಬಸ್‌ಗಾಗಿ ಗಂಟೆ ಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಇದೆ. ಇದು ಈ ಒಂದು ಗ್ರಾಮದ ಸ್ಥಿತಿಯಲ್ಲಿ. ಜಿಲ್ಲೆಯ ಎಷ್ಟೋ ಗ್ರಾಮಗಳು ಈ ವರೆಗೂ ಬಸ್ ತಂಗುದಾಣ ಕಾಣೆಯಾಗಿವೆ.

ಬೇಸಿಗೆಯಲ್ಲಿ ಬಸ್ ತಂಗುದಾಣಗಳ ಅಗತ್ಯತೆ ಹೆಚ್ಚಾಗಿದ್ದು, ಹಳ್ಳಿಗಳಿಗೆ ಸಂಪರ್ಕ ಕಲ್ಪಿಸಬೇಕಿದ್ದ ಬಸ್ ವ್ಯವಸ್ಥೆಸಹ ಕೆಲವು ಹಳ್ಳಿಗಳಿಗೆ ಇಲ್ಲ. ಇನ್ನು ಕೆಲವು ಹಳ್ಳಿಗಳಿಗೆ ಒಂದು ಅಥವಾ ಎರಡು ಬಸ್‌ಗಳು ಬರುತ್ತವಷ್ಟೇ. ಈ ಗ್ರಾಮಗಳ ಜನ ಬಸ್‌ ಬರುವ ವರೆಗೂ ಕಾಯುತ್ತಾರೆ, ಬಸ್‌ ಬಂದಮೇಲೆ ಬಸ್‌ನಲ್ಲಿ ಜನ ತುಂಬಿಕೊಳ್ಳುವವರೆಗೂ ಕಾಯಬೇಕು. ನಾವುಗಳು ನಮ್ಮ ಈ ಸಮಸ್ಯೆಯ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬುದು ಈ ಗ್ರಾಮಸ್ಥರ ಆರೋಪ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...