ಯಾದಿಗಿರಿ ಜಿಲ್ಲೆಯ ವಿಭೂತಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಗ್ರಾಮದಿಂದ ಶಹಾಪುರಕ್ಕೆ ಬೆಳಗಿನ ವೇಳೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಶಹಾಪುರ ಸಾರಿಗೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ ‘ಕಾರ್ಮಿಕರ ಸೇವಕರು ಸಂಘಟನೆ’ಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಸಂಘಟನೆಯ ಮುಖಂಡ ಮಾಳಪ್ಪ ಪೂಜಾರಿ, “ವಿಭೂತಿಹಳ್ಳಿಯಿಂದ ಪ್ರತಿನಿತ್ಯ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆಯಿಲ್ಲ. ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ” ಎಂದರು.
“ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದಲ್ಲಿ, ಮುಂದಿನ ದಿನದಲ್ಲಿ ವಿಭೂತಿಹಳ್ಳಿಯಿಂದ ಶಹಾಪುರಕ್ಕೆ ಪ್ರತಿಭಟನಾ ಪಾದಯಾತ್ರೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಹಕ್ಕೊತ್ತಾಯ ಸಲ್ಲಿಸುವ ವೇಳೆ, ಮಾಳಪ್ಪ ಎಸ್ ಪೂಜಾರಿ, ಆಂಜನೇಯ ಬಿರೆದಾರ, ರಾಜು ನಾಯ್ಕೋಡಿ, ಹಯ್ಯಳಪ್ಪ ಟನಿಕೆದಾರ,ದೇವರಾಜ ವಿಶ್ವಕರ್ಮ, ಹಾಗೂ ವಿದ್ಯಾರ್ಥಿಗಳು ಇದ್ದರು.