ಯಾದಗಿರಿ | ಜೋಡಿ ಕೊಲೆ​ ಕೇಸ್‌ಗೆ ಟ್ವಿಸ್ಟ್; ಪ್ರಕರಣದ ಹಿಂದೆ ವಿವಾಹೇತರ ಸಂಬಂಧದ ನೆರಳು

Date:

ಯಾದಗಿರಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

- Advertisement -

ಇತ್ತೀಚೆಗೆ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗುಂಪುಗಳಿಂದ ದಲಿತ ಮುಖಂಡ ಮಾಪಣ್ಣ (52) ಹಾಗೂ ಆತನ ಸಹಚರ ಅಲಿಸಾಬ (55)ರನ್ನು ಹತ್ಯೆ ಮಾಡಲಾಗಿತ್ತು. ಸದ್ಯ ಕೊಲೆ ಆರೋಪಿಗಳಾದ ಶಿವಪ್ಪಗೌಡ, ಹುಸೇನಿ, ಮೊಹಮ್ಮದ್ ರಿಯಾಜ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾ.16 ರಂದು ಸಾದ್ಯಾಪುರ ಕ್ರಾಸ್ ಬಳಿ ಕಟಿಂಗ್ ಮಾಡಿಸಿಕೊಂಡು ಹೋಗುತ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ ಒಂದು ಬರ್ಬರವಾಗಿ ಕೊಲೆ ಮಾಡಿತ್ತು.

ಇನ್ನು ಬಂಧಿತ ಆರೋಪಿ ಶಿವಪ್ಪಗೌಡ 11 ವರ್ಷಗಳ ಹಿಂದೆ ಅನೈತಿಕ ಸಂಬಂಧದಲ್ಲಿ ದಲಿತ ಮುಖಂಡ ಮಾಪಣ್ಣನ ಕಣ್ಣಿಗೆ ಸಿಕ್ಕಿಬಿದ್ದಿದ್ದ. ಆಗ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಇದೇ ವಿಚಾರಕ್ಕೆ ಮಾಪಣ್ಣ ಮತ್ತು ಶಿವಪ್ಪಗೌಡ ನಡುವೆ ದ್ವೇಷ ಬೆಳೆದಿತ್ತು. ಹಾಗಾಗಿ 2014ರಲ್ಲಿ ಮಾಪಣ್ಣ ಕೊಲೆಗೆ ರೌಡಿಶೀಟರ್ ಹುಸೇನಿಗೆ ಶಿವಪ್ಪಗೌಡ ಸುಪಾರಿ ಕೊಟ್ಟಿದ್ದ.

2014ರಲ್ಲಿ ಭೀಮರಾಯನಗುಡಿ ಬಳಿ ಮಾಪಣ್ಣನ ರೌಡಿಶೀಟರ್ ಹುಸೇನಿ ಗ್ಯಾಂಗ್​ ಗುಂಡಿನ ದಾಳಿ ಮಾಡಿತ್ತು. ಆಗ ಮಾಪಣ್ಣ ಸ್ವಲ್ಪದರಲ್ಲೇ ಬದುಕುಳಿದಿದ್ದ. ಬಳಿಕ 3 ಬಾರಿ ಮಾಪ್ಪಣ್ಣನ ಮೇಲೆ ಸುಪಾರಿ ಗ್ಯಾಂಗ್ ದಾಳಿ ಮಾಡಿತ್ತು. 2019ರಲ್ಲಿ ಮಾಪಣ್ಣ ಗ್ಯಾಂಗ್ ಹುಸೇನಿಯ ಮೇಲೆ ಹಲ್ಲೆ ಮಾಡಿತ್ತು. ಇದರಿಂದಾಗಿ ಮಾಪಣ್ಣ ಹಾಗೂ ಹುಸೇನಿ ನಡುವೆ ದ್ವೇಷ ಬೆಳೆದಿತ್ತು.

ಇದನ್ನೂ ಓದಿ: ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರತೆ ಖಂಡನೀಯ: ದಸಂಸ ಪ್ರತಿಭಟನೆ

ಪ್ರತಿ ಭಾನುವಾರ ಮಾಪಣ್ಣ ಭೀಮರಾಯನಗುಡಿಗೆ ಬರುತ್ತಿದ್ದ. ಬೈಕ್​ನಲ್ಲಿ ಬರುತ್ತಿದ್ದ ಮಾಪಣ್ಣನನ್ನು ಕಾರಿನಲ್ಲಿ ಬೆನ್ನಟ್ಟಿದ್ದ ಗ್ಯಾಂಗ್, ಸಾದ್ಯಾಪುರ ಕ್ರಾಸ್ ಬಳಿ ಬೈಕ್​ಗೆ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...