ಯಾದಗಿರಿ | ಬಸನಗೌಡ ಮರ್ಕಲ್ ಸಾವಿನ ಬೆನ್ನಲ್ಲೇ ವೈರಲ್ ವಿಡಿಯೋ; ಹೇಮರೆಡ್ಡಿ ಮಲ್ಲಮ್ಮ ಸಹಕಾರಿ ಸಂಘದ ಪ್ರಕರಣಕ್ಕೆ ಹೊಸ ತಿರುವು

Date:

ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರಿ ಸಂಘದ ಜಿಲ್ಲಾಧ್ಯಕ್ಷ ಹಾಗೂ ಉದ್ಯಮಿ ಬಸನಗೌಡ ಮರ್ಕಲ್ ಅವರು ಶಾಹಪುರದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಈ ದುರ್ಘಟನೆಯ ಬೆನ್ನಲ್ಲೇ ಅವರು ಈ ಹಿಂದೆ ದಾಖಲಿಸಿದ್ದ ವಿಡಿಯೋ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಕಾರಿ ಸಂಘದಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರ ಪ್ರಕರಣ ಮತ್ತೊಮ್ಮೆ ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುವಾಗಿದೆ.

- Advertisement -

ಕೆಲವು ತಿಂಗಳುಗಳಿಂದ ಸಹಕಾರಿ ಸಂಘದಲ್ಲಿ ಕೋಟ್ಯಂತರ ರೂಪಾಯಿ ಹಣದ ದುರುಪಯೋಗ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ. ಇದೇ ವಿಚಾರವಾಗಿ ದಾಖಲಾಗಿರುವ ವಿಡಿಯೋದಲ್ಲಿ ಬಸನಗೌಡ ಮರ್ಕಲ್, ತಮ್ಮ ಸಹಿಯನ್ನು ನಕಲಿ ಮಾಡಿ ಹಣ ವರ್ಗಾವಣೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಅಕ್ರಮದ ಬಗ್ಗೆ ಮಾಹಿತಿ ದೊರೆತ ಕೂಡಲೇ 2026ರ ಏಪ್ರಿಲ್ 13ರಂದು ಸಂಬಂಧಪಟ್ಟವರ ವಿರುದ್ಧ ದೂರು ಸಲ್ಲಿಸಿರುವುದಾಗಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕರಣ ಬೆಳಕಿಗೆ ಬಂದ ಬಳಿಕ ಹಿರಿಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಣ ದುರುಪಯೋಗಪಡಿಸಿಕೊಂಡವರು ಮತ್ತು ಸಾಲ ಪಡೆದವರು ಬಾಕಿ ಹಣವನ್ನು ಮರುಪಾವತಿಸುವುದಾಗಿ ಒಪ್ಪಿಕೊಂಡಿದ್ದರು. ಆದರೆ ತಮ್ಮನ್ನು ಹೊರತುಪಡಿಸಿ ಉಳಿದವರು ಹಣ ಪಾವತಿಸದ ಕಾರಣ ಸಂಘದ ಎಫ್‌ಡಿ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ನನ್ನ ಪಾಲಿನ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿಭಾಯಿಸಿದ್ದೇನೆ. ಆದರೆ ಉಳಿದವರು ಹಣ ಪಾವತಿಸದಿರುವುದರಿಂದ ಠೇವಣಿದಾರರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ತೀವ್ರ ಮಾನಸಿಕ ನೋವು ಅನುಭವಿಸುತ್ತಿದ್ದೇನೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಸಂಘದ ಸಿಬ್ಬಂದಿಯನ್ನು ಅತಿಯಾಗಿ ನಂಬಿದ್ದೇ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ ಎಂದು ಹೇಳಿರುವ ಅವರು, ಪ್ರಕರಣದ ನಂತರ ತಮ್ಮ ಕುಟುಂಬವೂ ಮಾನಸಿಕ ಒತ್ತಡ ಅನುಭವಿಸುತ್ತಿದೆ ಎಂದು ತಿಳಿಸಿದ್ದಾರೆ. ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕುಟುಂಬದೊಂದಿಗೆ ತಾಳೆ ಹಾಕಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಲಗಾರರು ಹಾಗೂ ಹಣ ದುರುಪಯೋಗಪಡಿಸಿಕೊಂಡವರು ಬಾಕಿ ಮೊತ್ತವನ್ನು ಪಾವತಿಸಿದರೆ ಮಾತ್ರ ಠೇವಣಿದಾರರ ಹಣವನ್ನು ಮರಳಿಸಲು ಸಾಧ್ಯವಾಗುತ್ತದೆ ಎಂದು ಅವರು ಕೈಮುಗಿದು ಮನವಿ ಮಾಡಿಕೊಂಡಿದ್ದಾರೆ.

ಇದೀಗ ಬಸನಗೌಡ ಮರ್ಕಲ್ ಅವರ ನಿಧನದ ಹಿನ್ನೆಲೆಯಲ್ಲಿ ಈ ವಿಡಿಯೋ ಮತ್ತೆ ವೈರಲ್ ಆಗಿದ್ದು, ಪ್ರಕರಣದ ಕುರಿತು ಹಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಆದರೆ ಅವರ ನಿಧನದ ಕಾರಣದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವೇ ಸಾವಿನ ನಿಖರ ಕಾರಣ ಸ್ಪಷ್ಟವಾಗುವ ಸಾಧ್ಯತೆ ಇದೆ.

ಇದನ್ನು ಓದಿದ್ದೀರಾ? ಯಾದಗಿರಿ | ಎಸ್‌ಐಆರ್ ವಿರುದ್ಧ ಜಾತ್ಯತೀತ ಪಕ್ಷಗಳ ಮೌನ ಸಮರ; ಕಪ್ಪು ಬಟ್ಟೆ ಕಟ್ಟಿಕೊಂಡು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ

ಒಂದೆಡೆ ಮರ್ಕಲ್ ಅವರ ಅಗಲಿಕೆಗೆ ಕುಟುಂಬಸ್ಥರು, ಆಪ್ತರು ಮತ್ತು ಸಂಘದ ಸದಸ್ಯರು ಕಂಬನಿ ಮಿಡಿಯುತ್ತಿದ್ದರೆ, ಮತ್ತೊಂದೆಡೆ ಸಹಕಾರಿ ಸಂಘದ ಆರ್ಥಿಕ ಅವ್ಯವಹಾರ ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ಣಗೊಂಡು ಸತ್ಯಾಂಶ ಹೊರಬರಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...