ಯಾದಗಿರಿ | ‘ಓಟು ಕೊಡಿ, ನೋಟೂ ಕೊಡಿ’ ಅಭಿಯಾನದ ಮೂಲಕ ಸೋಮಶೇಖರ್ ಮತಯಾಚನೆ

Date:

  • ಅಮೂಲ್ಯವಾದ ಓಟಿನ ಜೊತೆ ಉದಾರವಾಗಿ ಕಾಣಿಕೆ ಕೊಡಬೇಕೆಂದು ಮನವಿ
  • ಜನಸಾಮಾನ್ಯರ ಜೊತೆ ನಿರಂತರ ಸಂಪರ್ಕವಿರುವ ಅಭ್ಯರ್ಥಿ ಗೆಲ್ಲಿಸುವಂತೆ ಕರೆ

ಯಾದಗಿರಿ ವಿಧಾನಸಭಾ ಕ್ಷೇತ್ರದ ಎಸ್‌ಯುಸಿಐ (ಕಮ್ಯುನಿಸ್ಟ್) ಅಭ್ಯರ್ಥಿ ಕೆ ಸೋಮಶೇಖರ್ ಜನಸಾಮಾನ್ಯರ ಬಳಿ ಹೋಗಿ ‘ಓಟು ಕೊಡಿ, ನೋಟು ಕೊಡಿ’ ಎಂಬ ಅಭಿಯಾನದ ಮೂಲಕ ಮತಯಾಚನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಯಾದಗಿರಿ ವಿಧಾನಸಭಾ ಕ್ಷೇತ್ರದ ಸುಭಾಷ್ ವೃತ್ತದಲ್ಲಿ ಅಂಗಡಿಮುಗ್ಗಟ್ಟುಗಳಿಗೆ ತೆರಳಿದ ಕೆ ಸೋಮಶೇಖರ್, “ನಾನು ಹಲವು ವರ್ಷಗಳಿಂದ ಜನರ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ಮಾಡುತ್ತಿದ್ದೇನೆ. ಯಾದಗಿರಿ ಮತಕ್ಷೇತ್ರದ ಜನತೆಯು ತಮ್ಮ ಅಮೂಲ್ಯವಾದ ಓಟನ್ನು ನಮಗೆ ನೀಡುವುದರ ಜೊತೆಗೆ ಉದಾರವಾಗಿ ಕಾಣಿಕೆ ಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ಅರಸೀಕೆರೆ | ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೇಸ್, ಬಿಜೆಪಿ, ಜೆಡಿಎಸ್‌ಗಳು ಬಂಡವಾಳಶಾಹಿಗಳಿಂದ ದುಡ್ಡು ತೆಗೆದುಕೊಂಡು ಅಧಿಕಾರಕ್ಕೆ ಬಂದ ನಂತರ ಅವರ ಪರವಾಗಿ ನೀತಿಗಳನ್ನು ರೂಪಿಸುತ್ತವೆ. ಆದರೆ, ನಮ್ಮ ಪಕ್ಷವು ಸಂಪೂರ್ಣವಾಗಿ ಜನರ ಮೇಲೆಯೇ ಅವಲಂಬಿತವಾಗಿದ್ದು, ಜನರೇ ಪಕ್ಷಕ್ಕೆ ತನು-ಮನ-ಧನದಿಂದ ಬೆಂಬಲವಾಗಿ ನಿಲ್ಲಬೇಕು” ಎಂದು ಹೇಳಿದರು.

ನಗರದ ಹಲವು ಅಂಗಡಿಗಳಿಗೆ ತೆರಳಿದ ಇವರು ಅಲ್ಲಿ ನೆರೆದಿದ್ದ ಜನರಲ್ಲಿ ಮತ ಯಾಚಿಸುವುದರ ಜೊತೆಗೆ ನಿಧಿ ಸಂಗ್ರಹವನ್ನೂ ಮಾಡಿದರು. ಈ ವೇಳೇ ಪಕ್ಷದ ರಾಜ್ಯ ಸಮಿತಿ ಸದಸ್ಯ ವಿ. ಎನ್. ರಾಜಶೇಖರ್, ಜಿಲ್ಲಾ ಮುಖಂಡ ಡಿ. ಉಮಾದೇವಿ, ರಾಮಲಿಂಗಪ್ಪ ಬಿ ಎನ್, ಶಿವರಾಜ್, ಸುಭಾಷ್ ಚಂದ್ರ, ಶಿಲ್ಪಾ ಬಿ.ಕೆ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...