ಯಾದಗಿರಿ | ಚೆನ್ನಮ್ಮ ವಸತಿ ಶಾಲೆಯಲ್ಲಿ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ

Date:

ತಾಲೂಕಿನ ಮುಂಡರಗಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ 6ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ, ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪಾಲಕರ ಸಭೆ ನಡೆಸಲಾಯಿತು.

- Advertisement -

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ಮಲ್ಲನಗೌಡ ಪಾಟೀಲ್, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯವಿದ್ದಾಗ ಮಾತ್ರ ಶಾಲೆಯ ಸಮಗ್ರ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಸುರಕ್ಷತೆ, ಸರ್ಕಾರಿ ಯೋಜನೆಗಳ ಸೌಲಭ್ಯ ಹಾಗೂ ಗುಣಮಟ್ಟದ ಆಹಾರ ಒದಗಿಸುವುದಕ್ಕೆ ವಸತಿ ಶಾಲೆಯಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಕ್ಕಳು ಮೊಬೈಲ್‌ ಬಳಕೆಗೆ ಒಳಗಾಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದರು.

IMG 20260814 WA0502

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಭೀಮಾಶಂಕರ ಎಂ. ಯರಗೋಳ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಅನುಮಾನ, ಅವಮಾನ ಹಾಗೂ ಸವಾಲುಗಳನ್ನು ಮೆಟ್ಟಿ ನಿಂತು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆಯುವ ಮೂಲಕ ಶಾಲೆ, ಶಿಕ್ಷಕರು ಹಾಗೂ ತಂದೆ-ತಾಯಿಗಳಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಮಕ್ಕಳ ರಕ್ಷಣಾ ಘಟಕದ ಯಾದಗಿರಿ ವಿಭಾಗದ ಮೇಲ್ವಿಚಾರಕಿ ಶ್ರುತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಎದುರಾದರೆ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಬಹುದು. ತುರ್ತು ನೆರವಿಗಾಗಿ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಮುದಾಯ ಅಭಿವೃದ್ಧಿಗೆ ಸಂಘ, ಸಂಸ್ಥೆಗಳ ಸಮನ್ವಯ ಅಗತ್ಯ: ತೇಜಪ್ಪ ಬಲ್ಲೂರ್ಕರ್

ಕಾರ್ಯಕ್ರಮದಲ್ಲಿ ವಸತಿ ಶಾಲೆಯ ನಿಲಯ ಪಾಲಕ ಅಯ್ಯಳಪ್ಪ, ದೈಹಿಕ ಶಿಕ್ಷಕ ಗೋಪಾಲ ಗಿರಿಪ್ನೂರ್, ಸಿಬ್ಬಂದಿ ಆಮ್ಲಯ ಮುಕಾಸಿ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...