ಯಾದಗಿರಿ | ವಿವಾಹೇತರ ಸಂಬಂಧ‌ ಆರೋಪ: ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ ವಿಕೃತಿ

Date:

ತನ್ನ ಅಳಿಯನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಮೇಲೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ, ಖಾರದ ಪುಡಿ ಎರಚಿ ಕುಟುಂಬಸ್ಥರೇ ವಿಕೃತಿ ಮೆರೆದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ಅಕ್ಟೋಬರ್ 16ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಮಾನವೀಯ ದೌರ್ಜನ್ಯ ಎಸಗಿದ 11 ಆರೋಪಿಗಳ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಮಹಿಳೆಯು ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ, ಆಗ್ಗಾಗ್ಗೆ ತನ್ನ ಚಿಕ್ಕಮ್ಮನ‌ ಮನೆಗೆ ಹೋಗಿಬರುತ್ತಿದ್ದರು. ಅರವನ್ನು ಆಕೆಯ ಅಳಿಯ ತನ್ನ ಬೈಕ್‌ನಲ್ಲಿ ಕರೆದೊಯ್ಯುವುದು, ಕರೆತಂದು ಬಿಡುವುದು ಮಾಡುತ್ತಿದ್ದರು. ಆ ಕಾರಣಕ್ಕೆ ಅವರಿಬ್ಬರ ನಡುವೆ ವಿವಾಹೇತರ ಸಂಬಂಧವಿದೆ ಎಂಬ ಶಂಕಿಸಿದ ಮಹಿಳೆಯ ಕುಟುಂಬಸ್ಥರು ಆಕೆಯ ಮೇಲೆ‌ ವಿಕೃತಿ ಮರೆದಿದ್ದಾರೆ ಎಂದು ವರದಿಯಾಗಿದೆ.

ಆಕೆಯನ್ನು ನಗ್ನಗೊಳಿಸಿ, ತಲೆ ಬೋಳಿಸಿ, ಆಕೆಯ ದೇಹಕ್ಕೆ ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ವಿಕೃತ ದೌರ್ಜನ್ಯ ಎಸಗಿದ್ದಾರೆ. ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯು ಅಕ್ಟೋಬರ್ 17ರಂದು ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಾದ ಕಸ್ತೂರಿಬಾಯಿ, ಡಾಕಪ್ಪ, ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಬಾಯಿ, ತಿಪ್ಪಿಬಾಯಿ, ರೂಪ್ಲಿಬಾಯಿ, ಅನುಸೂಯಾ, ಚಾವಳಿಬಾಯಿ ಮತ್ತು ತಿಪ್ಪಣ್ಣ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...