ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

Date:

  • ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು
  • ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ

ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ.

- Advertisement -

ಮಾರ್ಚ್ 24ರಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಅವರಿಗೆ ಬೆಂಬಲ ನೀಡಲು ಗ್ರಾಮದಲ್ಲಿ ಪಂಚರತ್ನ ಯಾತ್ರೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಳಿದ ಆಹಾರ ಸೇವಿಸಿ ಜಾನುವಾರುಗಳು ಮೃತಪಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಸ್ಥಳೀಯ ನಿವಾಸಿ ಮಲ್ಲಿಕಾರ್ಜುನ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಊಟವನ್ನು ಕಾರ್ಯಕ್ರಮದ ಬಳಿಕ ಜಮೀನಿನಲ್ಲಿ ಹಾಕಲಾಗಿತ್ತು. ಬೇಸಿಗೆ ವೇಳೆ ಯಾದಗಿರಿ ಭಾಗದಲ್ಲಿ, ಸಾಮಾನ್ಯವಾಗಿ ಜಾನುವಾರುಗಳನ್ನು ತಾವಾಗಿಯೇ ಮೇಯಲು ಬಿಡುತ್ತಾರೆ” ಎಂದು ತಿಳಿಸಿದರು.

“ಮೇಯಲು ಹೋದ ಸುಮಾರು 30-35 ಜಾನುವಾರುಗಳು ಉಳಿಕೆ ಆಹಾರವನ್ನು ರಾತ್ರಿಯಿಡೀ ತಿಂದು ಅಸ್ವಸ್ಥವಾಗಿದ್ದವು. ಅಲ್ಲದೆ ಮಾರ್ಚ್ 25ರಂದು ಯಾವುದೇ ಜಾನುವಾರುಗಳು ಮನೆಗೆ ಮರಳಿರಲಿಲ್ಲ. ಜಾನುವಾರುಗಳ ಹೊಟ್ಟೆ ಉಬ್ಬಿರುವುದನ್ನು ಕಂಡ ಕೆಲವು ಸ್ಥಳೀಯರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು” ಎಂದು ಮಲ್ಲಿಕಾರ್ಜುನ್‌ ತಿಳಿಸಿದರು.

ಘಟನೆ ಕುರಿತು ವಿಷಯ ತಿಳಿದ ಬಳಿಕ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ರಾಜು ದೇಶಮುಖ್ ಅವರು ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ಪಶುವೈದ್ಯರೊಂದಿಗೆ ಗ್ರಾಮಕ್ಕೆ ಧಾವಿಸಿದರು.

ವೈದ್ಯರು ಜಾನುವಾರುಗಳನ್ನು ಪರೀಕ್ಷಿಸಿ, “ಸುಮಾರು ಒಂಬತ್ತು ಜಾನುವಾರುಗಳು ಈಗಾಗಲೇ ಮೃತಪಟ್ಟಿವೆ. ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ನಡೆಸಲಾಗಿದೆ. ಕಳಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿಸಿದೆ” ಎಂದು ತಿಳಿಸಿದ್ದಾರೆ.

“ಕೊಳೆತು ಹೋಗಿದ್ದ ಆಹಾರವನ್ನು ಪ್ರತಿ ಜಾನುವಾರು ಸುಮಾರು 5-6 ಕೆಜಿ ಅನ್ನವನ್ನು ಸೇವಿಸಿರಬಹುದು. ಚಿಕಿತ್ಸೆ ಪಡೆಯುತ್ತಿದ್ದ ಜಾನುವಾರುಗಳಲ್ಲಿ ಭಾನುವಾರ (ಮಾರ್ಚ್‌ 26) ಆರು ಮೃತಪಟ್ಟಿವೆ. ಇನ್ನೂ 20 ಜಾನುವಾರುಗಳು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತವೆ” ಎಂದು ಹೇಳಿದ್ದಾರೆ.

ಘಟನೆಯ ನಂತರ, ಆಹಾರವನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿಗೆ ನಿರ್ದೇಶನ ನೀಡಿದ ಬಳಿಕ ಅವರು ಉಳಿದ ಆಹಾರವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...