ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

Date:

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅಧಿಕಾರಿಗಳು ದಾಳಿ ನಡೆಸಿ 29 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದ ಹೊರವಲಯದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕಂಭಾವಿ-ಸುರಪುರ ರಸ್ತೆಯ ಬದಿಯಲ್ಲಿರುವ ಬಸವರಾಜ ತಂದೆ ಆಡಪ್ಪ ಸಜ್ಜನ ಅವರ ಮನೆ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು. ಪರಿಶೀಲನೆ ಸಂದರ್ಭದಲ್ಲಿ 29 ಕ್ವಿಂಟಾಲ್ ಪಡಿತರ ಅಕ್ಕಿ ಪತ್ತೆಯಾಗಿದ್ದು, ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ₹67,280 ಎಂದು ಇಲಾಖೆ ತಿಳಿಸಿದೆ.

ಪಡಿತರ ವ್ಯವಸ್ಥೆಯ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಬೇಕಾದ ಆಹಾರ ಧಾನ್ಯವನ್ನು ಅಕ್ರಮವಾಗಿ ಸಂಗ್ರಹಿಸಿ, ಸಾಗಣೆ ಅಥವಾ ಮಾರಾಟ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಈ ಸಂಬಂಧ ಬಸವರಾಜ ವಿರುದ್ಧ ಸೆ.25ರಂದು ಕಂಭಾವಿ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955ರ ಕಲಂ 3 ಮತ್ತು 7ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಖ್ಯೆ 173/2026 ಆಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...