ಯಾದಗಿರಿ | ವಸತಿ ಶಾಲೆ ಶೌಚಾಲಯದಲ್ಲಿ 9ನೇ ತರಗತಿ ಬಾಲಕಿ ಹೆರಿಗೆ ಪ್ರಕರಣ : ನಾಲ್ವರು ಅಮಾನತು

Date:

Advertisements

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬುಧವಾರ (ಆ.27)ರಂದು ಮಧ್ಯಾಹ್ನ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಚಾರ್ಯೆ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನೆಲೆ ವಸತಿ ನಿಲಯದ ಪ್ರಾಚಾರ್ಯೆ ಬಸಮ್ಮ, ವಾರ್ಡನ್ ಗೀತಾ, ವಿಜ್ಞಾನ ಶಿಕ್ಷಕ ನರಸಿಂಹಮೂರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆ.28ರಂದು ಆದೇಶಿಸಿದ್ದಾರೆ.

ಪೋಕ್ಸೋ ಪ್ರಕರಣ ದಾಖಲು:

ಕಳೆದ 9-10 ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಅಪರಿಚಿತ ವ್ಯಕ್ತಿ, ಬಸಮ್ಮ, ಗೀತಾ, ಸ್ಟಾಫ್ ನರ್ಸ್ ಕಾವೇರಮ್ಮ ಹಾಗೂ ಹೆರಿಗೆ ವಿಷಯ ಮರೆಮಾಚಲು ಯತ್ನಿಸಿದ ಆರೋಪದಡಿ ಸಂತ್ರಸ್ತ ಬಾಲಕಿಯ ಸಹೋದರ ಶರಣಬಸವ ಮೇಲೆ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆ ಕಲಂ 64, ಪೋಕ್ಸೋ ಕಾಯ್ದೆ ಕಲಂ 4,6,19, ಹಾಗೂ ಬಾಲ ನ್ಯಾಯ ಕಾಯ್ದೆ- 2015ರ ಕಲಂ 33, 34 ಅಡಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಅಧಿಕಾರಿಗಳು ಬಾಲಕಿಯ ಹೆರಿಗೆ ವಿಷಯವನ್ನು ಮೊದಲು ಗೌಪ್ಯವಾಗಿಟ್ಟಿದ್ದರು. ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಗಮನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಹಾಗೂ ಮಗುವನ್ನು ಶಹಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಬೀದರ್‌ | ಮಳೆ ಅಬ್ಬರ, ನದಿ, ಕೆರೆಗಳಲ್ಲಿ ಉಬ್ಬರ, ಜನಜೀವನ ತತ್ತರ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

Download Eedina App Android / iOS

X