ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿರುವ ಬಗ್ಗೆ ವರದಿಯಾಗಿದೆ.
ಆ.27ರಂದು ವಸತಿ ಶಾಲೆಯ ಶೌಚಾಲಯದಲ್ಲಿ ಮಧ್ಯಾಹ್ನ ಬಾಲಕಿಗೆ ಹೆರಿಗೆಯಾಗಿರುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ಬಂದಿದ್ದು, ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ.
ಸದ್ಯ ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿ ಹಾಗೂ ಮಗು ಆರೋಗ್ಯವಾಗಿ ಇದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಔರಾದ್ ಸೀಮೆಯ ಕನ್ನಡ | ದನ ಕಾಯೋರು ತಿಂಗಳಿಗೆ ಪಗಾರ್ ಎಷ್ಟು ತಕೋತಾರ್ ಗೊತ್ತಾ!