ಈಜಾಡಲು ಹೋಗಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವಡಗೇರಾ ತಾಲ್ಲೂಕಿನ ವ್ಯಾಪ್ತಿಯ ಕಮಲಾನಾಯಕ ತಾಂಡಾದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ವಿನೋದ ರಾಮು ಜಾಧವ(14) ಮೃತ ವಿದ್ಯಾರ್ಥಿ. ವಡಗೇರಾ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್‌ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ. ಅದರಲ್ಲಿ ವಿನೋದ ಎಂಬ ಬಾಲಕ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ಬಾಲಕ ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿಷಯ ತಿಳಿದು ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೇಬೂಬಅಲಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ ಜಿಲ್ಲೆ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗೆ ನೀಲನಕ್ಷೆ ತಯಾರಿಸಿ : ಸಚಿವ ಪ್ರಿಯಾಂಕ್ ಖರ್ಗೆ