ಯಾದಗಿರಿ | ಹಿರಿಯ ನಾಗರಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ

Date:

ಹಿರಿಯ ನಾಗರಿಕರೊಬ್ಬರ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗುರುಮಠಕಲ್‌ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ನಡೆದಿದೆ.

- Advertisement -

ಪುಟಪಾಕ ಗ್ರಾಮದ ಹಿರಿಯರಾದ ನರಸಪ್ಪ ತಂದೆ ರಾಮಪ್ಪ (65) ಅವರ ಮೇಲೆ ಅದೇ ಗ್ರಾಮದ ಮುಸ್ಲಿಂ ಸಮಾಜದ ಯುವಕನೊಬ್ಬ ಕುಡಿದ ಅಮಲಿನಲ್ಲಿ ನರಸಪ್ಪ ಅವರೊಂದಿಗೆ ಜಗಳ ತೆಗೆದಿದ್ದು, ಅವರ ಮೈಮೇಲೆ ಪೆಟ್ರೋಲ್ ಎರಚಿ, ಬೆಂಕಿ ಹಚ್ಚಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ದಾಳಿಯ ಪರಿಣಾಮವಾಗಿ ನರಸಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಗ್ರಾಮಸ್ಥರು ಕೂಡಲೇ ಅವರನ್ನು ತೆಲಂಗಾಣದ ನಾರಾಯಣಪೇಟ ನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೆ.ಬಿ. ವಾಸು ಅವರು ಆಸ್ಪತ್ರೆಗೆ ಭೇಟಿ ನೀಡಿ, ನರಸಪ್ಪ ಅವರ ಆರೋಗ್ಯ ವಿಚಾರಿಸಿದ್ದಾರೆ. ದಲಿತ ಸಮುದಾಯದ ನರಸಪ್ಪ ಊರಡಿ ಅವರ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯತ್ನಾಳ್‌ ಕಾಂಗ್ರೆಸ್‌ಗೆ ಅರ್ಜಿ ಹಾಕಿಲ್ಲ, ಹಾಕಿದರೂ ಸೇರಿಸಿಕೊಳ್ಳುವುದು ಕಷ್ಟ: ಎಂ ಬಿ ಪಾಟೀಲ್

ಕೂಡಲೇ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಯನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...