ಯಾದಗಿರಿ | ಏಳೆಂಟು ತಿಂಗಳ ಬಳಿಕ ಕ್ರಮ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಇಬ್ಬರು ಶಿಕ್ಷಕರ ಅಮಾನತು

Date:

ಆರ್‌ಎಸ್‌ಎಸ್ ಪಥಸಂಚಲನ ಹಾಗೂ ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

- Advertisement -

ಯಾದಗಿರಿ ಡಿಡಿಪಿಐ ಚನ್ನಬಸವ ಮುಧೋಳ ಅವರು ಕರ್ನಾಟಕ ನಾಗರಿಕ ಸೇವಾ ನಿಯಮಗಳು–1957ರ ನಿಯಮ 10(1)ರ ಅಡಿಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ. ಕುಪ್ಪಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಅಣ್ಣಾಸಾಹೇಬ ದೇಶಮುಖ ಹಾಗೂ ಹುಣಸಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹ ಶಿಕ್ಷಕ ಗುರುರಾಜ ಜೋಶಿ ಅಮಾನತುಗೊಂಡ ಶಿಕ್ಷಕರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಅಮಾನತು ಆದೇಶದ ಪ್ರಕಾರ, ಇಬ್ಬರೂ ಶಿಕ್ಷಕರು ಆರ್‌ಎಸ್‌ಎಸ್ ಸಂಘಟನೆಯಲ್ಲಿ ಹುದ್ದೆ ಹೊಂದಿದ್ದು, ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ಕಾರಿ ನೌಕರರಿಗೆ ಅನ್ವಯವಾಗುವ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದಡಿ ಇಲಾಖಾ ಕ್ರಮ ಕೈಗೊಂಡು ಇಬ್ಬರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 7ರಿಂದ 8 ತಿಂಗಳ ಕಾಲ ಶಿಕ್ಷಣ ಇಲಾಖೆಯಿಂದ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ ಎನ್ನಲಾಗಿದೆ. ಇದನ್ನು ಪ್ರಶ್ನಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ನಿರಂತರವಾಗಿ ಹೋರಾಟ ನಡೆಸಿತ್ತು.

ಇದನ್ನು ಓದಿದ್ದೀರಾ? ಯಾದಗಿರಿ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ತಂದೆ, ಸಂಬಂಧಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘಟನೆ ಅಂದಿನ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದೂರು ಮತ್ತು ಮನವಿ ಸಲ್ಲಿಸಿ ಒತ್ತಾಯಿಸಿತ್ತು. ಸಂಘಟನೆಯ ನಿರಂತರ ಹೋರಾಟದ ಬಳಿಕ ಇದೀಗ ಶಿಕ್ಷಣ ಇಲಾಖೆ ಇಬ್ಬರು ಶಿಕ್ಷಕರ ವಿರುದ್ಧ ಅಮಾನತು ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...