ಯಾದಗಿರಿ | 200 ದಿನ ಕೆಲಸ, ₹600 ಕೂಲಿ ನೀಡುವಂತೆ ಆಗ್ರಹಿಸಿ ಕೃಷಿ ಕೂಲಿಕಾರರ ಪ್ರತಿಭಟನೆ

Date:

ವರ್ಷಕ್ಕೆ 200 ದಿನ ಉದ್ಯೋಗ, ದಿನಕ್ಕೆ ₹600 ಕೂಲಿ ಹಾಗೂ ಬಾಕಿ ಕೂಲಿ ಹಣ ತಕ್ಷಣ ಪಾವತಿಸುವಂತೆ ಆಗ್ರಹಿಸಿ ಹುಣಸಗಿ ತಾಲೂಕಿನ ಅರಕೇರಾ (ಜೆ) ಗ್ರಾಮ ಪಂಚಾಯಿತಿ ಕಚೇರಿ ಮುಂದೆ ನೂರಾರು ಕೃಷಿ ಕೂಲಿಕಾರರು ಬುಧವಾರ ಪ್ರತಿಭಟನೆ ನಡೆಸಿದರು.

- Advertisement -

ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಸಮಿತಿ ನೇತೃತ್ವದಲ್ಲಿ ನವೆಂಬರ್ 3ರಂದು ನಡೆದ ಪ್ರತಿಭಟನೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಯಾದಗಿರಿ ಜಿಲ್ಲಾ ಅಧ್ಯಕ್ಷ ದಾವಲಸಾಬ್ ನದಾಫ್, ಈ ವರ್ಷ ಭೀಕರ ಬರಗಾಲ ಆವರಿಸಿದ್ದು, ಸಕಾಲಕ್ಕೆ ಮಳೆಯಾಗದ ಕಾರಣ ಕೃಷಿ ಚಟುವಟಿಕೆಗಳು ಸಂಪೂರ್ಣ ಕುಂಠಿತಗೊಂಡಿವೆ. ಇದರಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿಕಾರರಿಗೆ ಉದ್ಯೋಗವಿಲ್ಲದೆ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಅನೇಕ ಕುಟುಂಬಗಳು ಬದುಕಿಗಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

Advertisements

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ಕೃಷಿ ಕೂಲಿಕಾರರ ನೆರವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಧಾವಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ ಕನಿಷ್ಠ 200 ದಿನ ಕೆಲಸ ನೀಡಬೇಕು ಹಾಗೂ ದಿನಕ್ಕೆ ₹600 ಕೂಲಿ ನಿಗದಿಪಡಿಸಬೇಕು. ಈಗಾಗಲೇ ದುಡಿದಿರುವ ಕಾರ್ಮಿಕರ ಬಾಕಿ ಕೂಲಿ ಹಣವನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸಬೇಕು ಎಂದು ಆಗ್ರಹಿಸಿದರು.

ಸಮರ್ಪಕ ಕಾರಣವಿಲ್ಲದೆ ಅನೇಕ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ರದ್ದುಗೊಳಿಸಿರುವುದರಿಂದ ಬಡ ಕಾರ್ಮಿಕ ಕುಟುಂಬಗಳು ಉದ್ಯೋಗ ಖಾತ್ರಿ ಯೋಜನೆಯ ಸೌಲಭ್ಯಗಳಿಂದ ವಂಚಿತವಾಗಿವೆ. ರದ್ದುಗೊಳಿಸಿರುವ ಜಾಬ್ ಕಾರ್ಡ್‌ಗಳನ್ನು ತಕ್ಷಣ ಪುನಃಸ್ಥಾಪಿಸಬೇಕು, ಅರ್ಹ ಕುಟುಂಬಗಳಿಗೆ ಹೊಸ ಜಾಬ್ ಕಾರ್ಡ್‌ಗಳನ್ನು ವಿತರಿಸಬೇಕು ಹಾಗೂ ಕೆಲಸ ಕೇಳುವ ಪ್ರತಿಯೊಬ್ಬ ಕೂಲಿಕಾರರಿಗೂ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಕೃಷಿ ಕೂಲಿಕಾರರು ಎದುರಿಸುತ್ತಿರುವ ಉದ್ಯೋಗ ಮತ್ತು ಕೂಲಿ ಸಂಬಂಧಿತ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಬರಗಾಲದ ಸಂಕಷ್ಟದಲ್ಲಿ ಗ್ರಾಮೀಣ ಕಾರ್ಮಿಕ ಕುಟುಂಬಗಳಿಗೆ ಸರ್ಕಾರಗಳು ನೆರವಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೌಚಾಲಯ ಕಟ್ಟಿದರೆ ಸಾಲದು, ಬಳಸಿದರೆ ಸಾಧನೆ: ಸಭಾಧ್ಯಕ್ಷ ಜಿ.ಎಸ್.ಪಾಟೀಲ

"ಹಳ್ಳಿಗಳಲ್ಲಿ ಶೌಚಾಲಯಗಳನ್ನು ಕಟ್ಟಿದ್ದೇವೆ, ಕಾಗದದ ಮೇಲೆ 'ಬಯಲು ಶೌಚಮುಕ್ತ ದೇಶ'ವೆಂದು ಘೋಷಿಸಿಕೊಂಡಿದ್ದೇವೆ....

ಗದಗ | ನಾಳೆ ಲೋಕಾಯುಕ್ತ ಬಿ.ಎಸ್.ಪಾಟೀಲ ಜಿಲ್ಲಾ ಪ್ರವಾಸ

"ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ನವೆಂಬರ್ 5 ರಂದು...

ಬಾಗಲಕೋಟೆ | ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ಗಜಾನನ ಬಾಲೆ

ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ...

ಶಿವಮೊಗ್ಗ | ಪೋಷಕರಾಗಲು ಅಡ್ಡದಾರಿಯಲ್ಲ; ಕಾನೂನು ಬದ್ಧ ದತ್ತು ಸ್ವೀಕಾರವೇ ಸರಿಯಾದ ಮಾರ್ಗ

ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಯಾವುದೇ ಅನಧಿಕೃತವಾಗಿ ಮಗುವನ್ನು ನೀಡುವುದು...