ಯಾದಗಿರಿ | 6 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಲು ಎಐಕೆಕೆಎಂಎಸ್ ಆಗ್ರಹ

Date:

ಯಾದಗಿರಿ ಜಿಲ್ಲೆಯ ರೈತರು ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಆರು ತಾಲೂಕುಗಳನ್ನು ತಕ್ಷಣವೇ ತೀವ್ರ ಬರಪೀಡಿತ ಎಂದು ಘೋಷಿಸಿ ವಿಶೇಷ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಆಗ್ರಹಿಸಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಸಂಘಟನೆಯ ಮುಖಂಡರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಈ ವೇಳೆ ಮಾತನಾಡಿದ ಮುಖಂಡರು, ‘ಮಳೆ ಕೊರತೆಯಿಂದ ಜಿಲ್ಲೆಯ ಒಣಭೂಮಿಯಲ್ಲಿ ಬಿತ್ತನೆಯಾಗಿರುವ ತೊಗರಿ, ಹತ್ತಿ, ಮೆಕ್ಕೆಜೋಳ, ಹೆಸರು ಹಾಗೂ ಎಳ್ಳು ಬೆಳೆಗಳು ಶೇ.60ಕ್ಕೂ ಹೆಚ್ಚು ಹಾನಿಗೊಳಗಾಗಿವೆ ಎಂದು ತಿಳಿಸಿದರು. ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದ ಶಹಾಪುರ, ಸುರಪುರ ಹಾಗೂ ಹುಣಸಗಿ ಭಾಗದಲ್ಲೂ ನೀರಿನ ಕೊರತೆಯಿಂದ ಶೇ.30ರಿಂದ 40ರಷ್ಟು ಬೆಳೆ ಹಾನಿಯಾಗಿದೆ’ ಎಂದು ಹೇಳಿದರು.

‘ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಮೇವಿನ ಕೊರತೆಯಿಂದ ಜಾನುವಾರುಗಳನ್ನು ಸಾಕುವುದೇ ರೈತರಿಗೆ ಹೊರೆಯಾಗಿದೆ. ಬೆಳೆ ಕೈಕೊಟ್ಟ ಪರಿಣಾಮ ರೈತರು ಸಾಲದ ಸುಳಿಗೆ ಸಿಲುಕಿದ್ದು, ಕೃಷಿ ಕಾರ್ಮಿಕರು ಉದ್ಯೋಗ ಅರಸಿ ಬೆಂಗಳೂರು, ಮುಂಬೈ, ಹೈದರಾಬಾದ್ ಸೇರಿದಂತೆ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಮುಖಂಡರು ಹೇಳಿದರು.

‘ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು, ಪಿಎಂಎಫ್‌ಬಿವೈ ಅಡಿಯಲ್ಲಿ ಬೆಳೆ ವಿಮೆ ಪರಿಹಾರವನ್ನು ಕೂಡಲೇ ಪಾವತಿಸಬೇಕು. ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡಿ, ಮುಂದಿನ ಹಂಗಾಮಿಗೆ ಪ್ರತಿ ಎಕರೆಗೆ ₹20 ಸಾವಿರ ಶೂನ್ಯ ಬಡ್ಡಿ ಸಾಲ ನೀಡಬೇಕು’ ಎಂದು ಒತ್ತಾಯಿಸಿದರು.

‘ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಉಚಿತ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು, ಪ್ರತಿ ಹೋಬಳಿ ಮಟ್ಟದಲ್ಲಿ ಉಚಿತ ಮೇವು ಬ್ಯಾಂಕ್ ಸ್ಥಾಪಿಸಬೇಕು ಹಾಗೂ ಉದ್ಯೋಗ ಖಾತರಿ ಯೋಜನೆಯಡಿ 200 ದಿನಗಳ ಕೆಲಸ ನೀಡಿ ದಿನಗೂಲಿಯನ್ನು ₹600ಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮಹಾನಗರ ಪಾಲಿಕೆ ಆಯುಕ್ತರಾಗಿ ಶ್ರವಣ್ ಕುಮಾರ್ ನೇಮಕ

ಪ್ರತಿಭಟನೆಯಲ್ಲಿ ಎಐಕೆಕೆಎಂಎಸ್ ಜಿಲ್ಲಾಧ್ಯಕ್ಷ ಜಮಾಲ್ ಸಾಬ್, ಜಿಲ್ಲಾ ಕಾರ್ಯದರ್ಶಿ ಭೀಮರೆಡ್ಡಿ ಹಿರೇಬಾನಾರ್, ಎಐಯುಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ವಿ.ಜಿ. ದೇಸಾಯಿ, ಜಿಲ್ಲಾಧ್ಯಕ್ಷೆ ಡಿ. ಉಮಾದೇವಿ ಸೇರಿದಂತೆ ವಿವಿಧ ಮುಖಂಡರು ಹಾಗೂ ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...

ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ...