ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Date:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಸಲ್ಲಿಸಿ ‘ಡಿ’ ಗ್ರೂಪ್ ಹುದ್ದೆ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಆರೋಪ ಸಾಬೀತಾದರೆ ಸಂಬಂಧಪಟ್ಟ ನೌಕರರನ್ನು ಸೇವೆಯಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸಮಾಜಸೇವಾ ಕಾರ್ಯಕರ್ತರ ವೇದಿಕೆ ಒತ್ತಾಯಿಸಿದರು.

- Advertisement -

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಮನೋಜ್ ಕುಮಾರ್, ‘ನಕಲಿ ದಾಖಲೆಗಳ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆದಿರುವ ಆರೋಪ ಎದುರಿಸುತ್ತಿರುವವರನ್ನು ಕೇವಲ ಅಮಾನತುಗೊಳಿಸುವುದು ಸೂಕ್ತ ಕ್ರಮವಲ್ಲ. ಪ್ರಕರಣದ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರೆಂದು ದೃಢಪಟ್ಟವರನ್ನು ಕಾಯಂ ಸೇವೆಯಿಂದ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

‘ನಕಲಿ ದಾಖಲೆಗಳನ್ನು ಸಲ್ಲಿಸಿ ಉದ್ಯೋಗ ಪಡೆದಿರುವುದು ಸಾಬೀತಾದಲ್ಲಿ, ಅವರು ಸೇವೆಗೆ ಸೇರಿದ ದಿನದಿಂದ ಸರ್ಕಾರದಿಂದ ಪಡೆದಿರುವ ವೇತನ, ಭತ್ಯೆ ಹಾಗೂ ಇತರೆ ಸೌಲಭ್ಯಗಳನ್ನು ನಿಯಮಾನುಸಾರ ವಸೂಲಿ ಮಾಡಬೇಕು. ಸಾರ್ವಜನಿಕ ಉದ್ಯೋಗಕ್ಕೆ ಅರ್ಹತೆ ಪಡೆಯಲು ಸುಳ್ಳು ದಾಖಲೆ ಬಳಸಿದ ಪ್ರಕರಣವಾಗಿರುವುದರಿಂದ ಕಾನೂನು ಪ್ರಕಾರ ಕ್ರಿಮಿನಲ್ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

‘ನೇಮಕಾತಿ ಸಂದರ್ಭದಲ್ಲಿ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲಿಸುವ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ನಕಲಿ ಅಂಕಪಟ್ಟಿಗಳು ಪರಿಶೀಲನೆಯ ಹಂತದಲ್ಲೇ ಪತ್ತೆಯಾಗದೆ ನೇಮಕಾತಿಗೆ ಅವಕಾಶ ದೊರೆತಿದ್ದರೆ, ಅದರ ಹಿಂದೆ ಯಾರಾದರೂ ನಿರ್ಲಕ್ಷ್ಯ ವಹಿಸಿದ್ದಾರೆಯೇ ಅಥವಾ ಅಕ್ರಮಕ್ಕೆ ಸಹಕರಿಸಿದ್ದಾರೆಯೇ ಎಂಬುದನ್ನು ತನಿಖೆಯಿಂದ ಬಹಿರಂಗಪಡಿಸಬೇಕು’ ಎಂದರು.

Advertisements

‘ಅಮಾನತುಗೊಂಡಿರುವ ನೌಕರರನ್ನು ಬೇರೆಡೆಗೆ ವರ್ಗಾಯಿಸಿ ಪ್ರಕರಣವನ್ನು ಮುಚ್ಚಿಹಾಕುವ ಯಾವುದೇ ಪ್ರಯತ್ನ ನಡೆಯಬಾರದು. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥ ನೌಕರರು ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಮನೋಜ್ ಕುಮಾರ್ ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಸುದ್ದಿಗೋಷ್ಠಿಯಲ್ಲಿ ಸಮಾಜಸೇವಾ ಕಾರ್ಯಕರ್ತರ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ರಾಮಕೃಷ್ಣ ಹಾಗೂ ಪರಶುರಾಮ ಗಡೆರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...