ಯಾದಗಿರಿ | ಹೊರಗುತ್ತಿಗೆ ನೌಕರರ ವೇತನದಲ್ಲಿ ಲಕ್ಷಾಂತರ ರೂ. ವಂಚನೆ ಆರೋಪ: ದೀಕ್ಷಾ ಏಜೆನ್ಸಿ ವಿರುದ್ಧ ದಸಂಸ ಪ್ರತಿಭಟನೆ

Date:

ಕನಿಷ್ಠ ವೇತನ ಜಾರಿಯಾಗಿದ್ದರೂ ಹೊರಗುತ್ತಿಗೆ ನೌಕರರಿಗೆ ಹಳೆಯ ವೇತನ ಪಾವತಿಸಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ದೀಕ್ಷಾ ಏಜೆನ್ಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮಾತನಾಡಿ, “ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸುಮಾರು 100ರಿಂದ 110 ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಜೂನ್ ತಿಂಗಳಲ್ಲಿ ಹೊಸ ಕನಿಷ್ಠ ವೇತನ ನೀಡಲಾಗಿತ್ತು. ಆದರೆ ಜುಲೈ ತಿಂಗಳಲ್ಲಿ ಹಳೆಯ ವೇತನ ನೀಡುವ ಮೂಲಕ ಪ್ರತಿ ನೌಕರರಿಗೆ ಸುಮಾರು 7ರಿಂದ 8 ಸಾವಿರ ರೂ. ಕಡಿಮೆ ವೇತನ ಪಾವತಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹೊಸ ವೇತನ ನೀಡುವಂತೆ ಏಜೆನ್ಸಿಗೆ ಸೂಚಿಸಿದ್ದರೂ ಅದನ್ನು ಪಾಲಿಸದೆ ಹಳೆಯ ವೇತನ ನೀಡಲಾಗಿದೆ. ಈ ಮೂಲಕ ಒಟ್ಟು ಸುಮಾರು 7ರಿಂದ 8 ಲಕ್ಷ ರೂ.ಗಳಷ್ಟು ಹಣವನ್ನು ನೌಕರರಿಗೆ ಕಡಿಮೆ ಪಾವತಿಸಲಾಗಿದೆ” ಎಂದು ದೂರಿದರು.

ಅಲ್ಲದೆ, “ವಿವಿಧ ಇಲಾಖೆಗಳ ಖಾಲಿ ಹುದ್ದೆಗಳಿಗೆ ನೇಮಕಾತಿ ನೀಡುವ ಸಂದರ್ಭದಲ್ಲಿ 30 ಸಾವಿರ ರೂ.ಗಳಿಂದ 1 ಲಕ್ಷ ರೂ.ವರೆಗೆ ಹಣ ಪಡೆಯಲಾಗುತ್ತಿದೆ ಎಂಬ ಗಂಭೀರ ಆರೋಪವೂ ಮನವಿಯಲ್ಲಿ ಮಾಡಲಾಗಿದೆ. ಉದ್ಯೋಗದ ಅವಧಿ ಮುಗಿದಿದೆ, ಮುಂದಿನ ವರ್ಷ ಮತ್ತೆ ವರ್ಕ್ ಆರ್ಡರ್ ನೀಡಲಾಗುವುದು ಎಂದು ಹೇಳಿ ಸಿಬ್ಬಂದಿಯಿಂದ ಹಣ ವಸೂಲಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಜಿಲ್ಲಾ ಆಸ್ಪತ್ರೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸಿದ್ದ ಅಶ್ವಿನಿ ಅವರಿಗೆ ಹೆರಿಗೆ ರಜೆ ನೀಡದೆ, ಹೆರಿಗೆಯ ನಂತರ ಕೆಲಸಕ್ಕೆ ಮರು ಸೇರ್ಪಡೆಗೊಳಿಸುವುದಾಗಿ ಹೇಳಿ ಅನ್ಯಾಯ ಮಾಡಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು 30 ಸಾವಿರ ರೂ. ಹಣ ಪಡೆದು, ಯಾದಗಿರಿಯಲ್ಲಿ ಕೆಲಸ ನೀಡುವುದಾಗಿ ಹೇಳಿ ಅಲ್ಲಿಪುರದಲ್ಲಿ ಕೆಲಸಕ್ಕೆ ನಿಯೋಜಿಸಲಾಗಿದೆ” ಎಂದು ಆರೋಪಿಸಿದರು.

ದೀಕ್ಷಾ ಏಜೆನ್ಸಿ ವಿರುದ್ಧ ಸಮಗ್ರ ತನಿಖೆ ನಡೆಸಿ, ನಿಯಮ ಉಲ್ಲಂಘನೆ ಹಾಗೂ ನೌಕರರಿಗೆ ವಂಚನೆ ಮಾಡಿರುವುದು ಸಾಬೀತಾದರೆ ಕಾನೂನು ಕ್ರಮ ಕೈಗೊಂಡು ಕಪ್ಪುಪಟ್ಟಿಗೆ ಸೇರಿಸಬೇಕು ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಚಂದಪ್ಪ ಮುನಿಯಪ್ಪನೋರ, ದೊಡ್ಡಪ್ಪ ಕಾಡಂಗೇರಾ, ತಾಯಪ್ಪ ಬಂಡಾರಿ, ಶರಬಣ್ಣ ದೋರನಹಳ್ಳಿ, ಸಿದಪ್ಪ ಕೊಡಮನಳ್ಳಿ, ನಾಗರಾಜ್ ಕೊಡಮನಳ್ಳಿ, ಹೊನ್ನಯ್ಯ ಪೂಜಾರಿ, ಶರಣಪ್ಪ ಕೊಂಬಿನ್, ಶಿವಯೋಗಿ ಮಳಗ, ಆಕಶ ಗಿರಪನೋರ್, ಪವನ ಮಾಡಗೆ, ಮೌನೇಶ್ ಹಳ್ಳಿ, ಮಲ್ಲು ಕ್ಯಾತನಾಳ, ಅಂಜನೇಯ, ರಾಹುಲ್ ಅರಕೇರಾ, ಕುಮಾರ ಅರಕೇರಾ, ರಾಧಾಕೃಷ್ಣ ಕಾಳೋರ, ಬಾಲಪ್ಪ ಹಳ್ಳಿ, ಮಹೇಶ್ ಅರಕೇರಾ, ಶ್ರವಣ ಮುನೇಯಪನೋರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...