ಯಾದಗಿರಿ | ಕಾನೂನು ಬಾಹಿರವಾಗಿ ಹುದ್ದೆ ಆಯ್ಕೆ ಆರೋಪ : ಅಧಿಕಾರಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ

Date:

ಶಹಾಪೂರ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಗ್ರಾ.ಕು.ನೀ.ನೈ.) ಉಪವಿಭಾಗದಲ್ಲಿ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಕಾನೂನು ಬಾಹಿರವಾಗಿ ನೇಮಕಾತಿ ನಡೆದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ನೀಲಿ ಸೇನೆಯ ರಾಜ್ಯ ಉಪಾಧ್ಯಕ್ಷ ಜಾಪರ ಹುಸೇನಿ ಅವರು ಉಸ್ತುವಾರಿ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಆಯರೆಡ್ಡಿ ಅವರನ್ನು ತಕ್ಷಣ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ‘ಶಹಾಪೂರ ಉಪವಿಭಾಗದ ಗ್ರಾ.ಕು.ನೀ.ನೈ. ಕಚೇರಿಯಲ್ಲಿ ಖಾಲಿ ಇರುವ ನೀರಿನ ಮಾದರಿ ಸಂಗ್ರಾಹಕ ಹುದ್ದೆಗೆ ಯಾವುದೇ ಸಾರ್ವಜನಿಕ ಪ್ರಕಟಣೆ, ಮೆರಿಟ್ ಆಧಾರಿತ ಆಯ್ಕೆ, ಮೀಸಲಾತಿ ನಿಯಮ ಅಥವಾ ಪಾರದರ್ಶಕ ಪ್ರಕ್ರಿಯೆ ಅನುಸರಿಸದೆ ಕಾನೂನುಬಾಹಿರವಾಗಿ ಆಯ್ಕೆ ಮಾಡಲಾಗಿದೆ. ಇದು ಸರ್ಕಾರದ ನೇಮಕಾತಿ ನಿಯಮಾವಳಿಗಳಿಗೆ ವಿರುದ್ಧವಾಗಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಂದುವರಿದು ಅವರು, ‘ಹುದ್ದೆ ಭರ್ತಿಯಲ್ಲಿ ಪಾರದರ್ಶಕತೆ ಹಾಗೂ ಅರ್ಹತಾ ಮಾನದಂಡಗಳನ್ನು ಪಾಲಿಸಬೇಕು. ಅನರ್ಹ ವ್ಯಕ್ತಿಯನ್ನು ನೇಮಕ ಮಾಡುವುದು ಸರಕಾರದ ನೀತಿಗೆ ಧಕ್ಕೆ ತರುತ್ತದೆ. ಆದ್ದರಿಂದ ಈ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಿ, ನಿಯಮಾನುಸಾರವಾಗಿ ಹೊಸ ಆಯ್ಕೆ ಪ್ರಕ್ರಿಯೆ ಕೈಗೊಳ್ಳಬೇಕು,’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ ವಿಚಾರಣೆ ನ.13ಕ್ಕೆ ಮುಂದೂಡಿಕೆ

‘ಒಂದು ವೇಳೆ ನೇಮಕಾತಿಯನ್ನು ತಡೆಯದಿದ್ದರೆ ಶಹಾಪೂರ ಉಪವಿಭಾಗದ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದೆಂದು’ ಎಚ್ಚರಿಕೆ ನೀಡುವುದರ ಮೂಲಕ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಅಧ್ಯಕ್ಷ ವಾಲ್ಮೀಕಿ ನಾಯಕರ, ವಿಶ್ವರಾಧ್ಯ ದಳವಾಯಿ, ಕಾಸಿಮಸಾಬ ನಡಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...