ಯಾದಗಿರಿ | ಕುರಿಹಾಳ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಅಕ್ರಮ ಆರೋಪ; ತನಿಖೆಗೆ ಛಲವಾದಿ ಮಹಾಸಭಾ ಆಗ್ರಹ

Date:

ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಹಳ್ಳಕ್ಕೆ ನಿರ್ಮಿಸಿರುವ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಕಿರಿಯ ಅಭಿಯಂತರ (ಜೆಇ) ವಿರುದ್ಧ ಕ್ರಮ ಕೈಗೊಂಡು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಛಲವಾದಿ ಮಹಾಸಭಾ ತಾಲೂಕು ಸಮಿತಿ ಆಗ್ರಹಿಸಿದೆ.

- Advertisement -

ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು, ‘2025-26ನೇ ಸಾಲಿನಲ್ಲಿ ಕೊಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಾಳ ಗ್ರಾಮದ ಹಳ್ಳಕ್ಕೆ ಕೈಗೊಂಡಿರುವ ಚೆಕ್‌ಡ್ಯಾಂ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಲ್ಲಿ ನಡೆದಿದ್ದು, ಕಾಮಗಾರಿ ಸಂಖ್ಯೆ MI/2025-26/IW/Work_Indent10005 ಅಡಿಯಲ್ಲಿ ನಿರ್ಮಾಣಗೊಂಡಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ಅಂದಾಜು ಪತ್ರಿಕೆಯಲ್ಲಿ ನಮೂದಿಸಿರುವ ಪ್ರಮಾಣದಲ್ಲಿ ಕಬ್ಬಿಣದ ರಾಡು, ಸಿಮೆಂಟ್ ಹಾಗೂ ಮರಳು ಬಳಸದೇ, ಬುಲ್ಡೋಜರ್ ಮೂಲಕ ದೊಡ್ಡ ಕಲ್ಲುಗಳನ್ನು ಹಾಕಿ ಅಡಿಪಾಯ ನಿರ್ಮಿಸಲಾಗಿದೆ. ಹೀಗಾಗಿ ಮಳೆ ಅಥವಾ ನೀರಿನ ಹರಿವು ಹೆಚ್ಚಾದರೆ ಚೆಕ್‌ಡ್ಯಾಂ ಒಡೆದು ಹೋಗುವ ಸಾಧ್ಯತೆ ಇದೆ. ಇದು ಅಂತರ್ಜಲ ಅಭಿವೃದ್ಧಿ ಹಾಗೂ ರೈತರ ಹಿತಕ್ಕೆ ಧಕ್ಕೆ ಉಂಟುಮಾಡಲಿದೆ’ ಎಂದು ಆರೋಪಿಸಲಾಗಿದೆ.

2291106 1

ಸುಮಾರು ₹1.90 ಲಕ್ಷ ವೆಚ್ಚದ ಕಾಮಗಾರಿಯನ್ನು ಕೇವಲ 15 ದಿನಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಕಾಂಕ್ರೀಟ್‌ಗೆ ಅಗತ್ಯವಾದ ಕ್ಯೂರಿಂಗ್ ಕೂಡ ಸಮರ್ಪಕವಾಗಿ ಮಾಡಿಲ್ಲ. ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಪರಿಶೀಲನೆ ನಡೆಸದೇ ಗುತ್ತಿಗೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತಾಂತ್ರಿಕ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಕಾಮಗಾರಿಯ ಯಾವುದೇ ಬಿಲ್ ಪಾವತಿಸಬಾರದು’ ಎಂದು ಛಲವಾದಿ ಮಹಾಸಭಾ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಸರಣಿ ಬಸ್ ಅಪಘಾತಕ್ಕೆ ಹಳೇ ವಾಹನ, ಹದಗೆಟ್ಟ ರಸ್ತೆಗಳೇ ಕಾರಣ; ಗುರುರಾಜ ಅಂಗಡಿ

‘ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...