ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

Date:

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ (ಎಐಬಿಎಸ್‌ಪಿ) ತೀವ್ರವಾಗಿ ಖಂಡಿಸಿದೆ. ಇಂತಹ ಘಟನೆಗಳು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಬದ್ಧ ಹಕ್ಕುಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ ಎಂದು ಪಕ್ಷದ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ. ವಾಸು ತಿಳಿಸಿದ್ದಾರೆ.

- Advertisement -

‘ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನೇತೃತ್ವದ ಆಂಧ್ರಪ್ರದೇಶ ಸರ್ಕಾರದ ಆಡಳಿತದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನಿರಾಕರಿಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ. ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಆಶಯವಾಗಿದ್ದು, ಯಾವುದೇ ರಾಜಕೀಯ ಪಕ್ಷದ ಅಭ್ಯರ್ಥಿಯ ಹಕ್ಕುಗಳನ್ನು ಅಧಿಕಾರದ ಪ್ರಭಾವದಿಂದ ಮೊಟಕುಗೊಳಿಸುವ ಪ್ರಯತ್ನ ನಡೆದಿದ್ದರೆ ಅದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

‘ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿರುವುದು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಅಗತ್ಯವನ್ನು ಎತ್ತಿಹಿಡಿದಿದೆ. ನಾಮಪತ್ರ ಸಲ್ಲಿಕೆಗೆ ಅಡ್ಡಿಪಡಿಸಲಾಗಿದೆ ಎಂಬ ದೂರುಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಲು ಚುನಾವಣಾ ಆಯೋಗ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪ್ರಜಾಪ್ರಭುತ್ವ ಯಾರೊಬ್ಬರ ಖಾಸಗಿ ಆಸ್ತಿಯಲ್ಲ; ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಜನರ ರಾಜಕೀಯ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕೆ.ಬಿ. ವಾಸು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...

ಉಡುಪಿ | ಸಾರಾಯಿ ಅಂಗಡಿಗೆ ಜಾಗವಿದೆ, ದಲಿತರಿಗೆ ನಿವೇಶನವಿಲ್ಲವೇ? : ಕೃಷ್ಣ ಮೂಡುಬೆಳ್ಳೆ

ಡಿಸಿ ಮನ್ನಾ ಜಮೀನು ಹಾಗೂ ವಸತಿ ನಿವೇಶನಗಳ ಹಕ್ಕುಪತ್ರ ವಿತರಣೆಯಲ್ಲಿ ದಲಿತರಿಗೆ...