ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಯಾದಗಿರಿ ನಗರಸಭೆಯ ಮಾಜಿ ಸದಸ್ಯ ಸೇರಿ ಆರು ಮಂದಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ರಾಠೋಡ್ ನೀಡಿದ ದೂರಿನ ಮೇರೆಗೆ ಯಾದಗಿರಿ ನಗರಸಭೆಯ ಮಾಜಿ ಸದಸ್ಯ ಶಂಕರ ರಾಠೋಡ್, ಸುನಿತಾ ರಾಠೋಡ್, ಪ್ರಿಯದರ್ಶಿನಿ ರಾಠೋಡ್, ಐಶ್ವರ್ಯಾ ರಾಠೋಡ್, ಪೃಥ್ವಿರಾಜ್ ರಾಠೋಡ್ ಹಾಗೂ ರಾಹುಲ್ ರಾಠೋಡ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರಿನ ಪ್ರಕಾರ, ಬಸವರಾಜ ರಾಠೋಡ್ ಅವರು 2021ರಲ್ಲಿ ಶಂಕರ ರಾಠೋಡ್ ಅವರಿಂದ ₹5 ಲಕ್ಷ ಸಾಲ ಪಡೆದಿದ್ದರು. ಬಳಿಕ ಅಸಲು ಹಾಗೂ ಬಡ್ಡಿ ಸೇರಿ ಒಟ್ಟು ₹8.50 ಲಕ್ಷ ಹಣವನ್ನು ಮರುಪಾವತಿ ಮಾಡಿದ್ದರೂ, ಇನ್ನೂ ಮೀಟರ್ ಬಡ್ಡಿ ಪಾವತಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನು ಓದಿದ್ದೀರಾ? ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ
This video cannot be played in your browser. Open the video directly
ಈ ವಿಚಾರವಾಗಿ ನಡೆದ ಮಾತಿನ ಚಕಮಕಿಯಲ್ಲಿ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಸವರಾಜ ರಾಠೋಡ್ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಯಾದಗಿರಿ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.





