ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

Date:

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು ಹಾಗೂ ಕುವೆಂಪು ಅವರ ವಿಚಾರಧಾರೆಗಳು ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತವೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು.

- Advertisement -

ನಗರದ ಶಹಾಪುರ ಹಳೆ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಅಂಬೇಡ್ಕರ್ ಅವರ ನೀಲಿ ಶಾಲ್ ಕುರಿತು ಮಾಡಿರುವ ಹೇಳಿಕೆಯನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ನೀಲಿ ಶಾಲ್ ಬಗ್ಗೆ ಮಾತನಾಡುವ ಮೊದಲು ಅಂಬೇಡ್ಕರ್ ಅವರ ಬಗ್ಗೆ ಎಷ್ಟು ತಿಳಿದುಕೊಂಡಿದ್ದೀರಿ? ಅವರ ವಿಚಾರಧಾರೆ, ಸಂವಿಧಾನ ನಿರ್ಮಾಣದಲ್ಲಿನ ಪಾತ್ರ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ನಡೆಸಿದ ಹೋರಾಟದ ಬಗ್ಗೆ ಎಷ್ಟು ಅರಿವಿದೆ?” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಅವರ ನೀಲಿ ಶಾಲ್ ಕುರಿತು ಹಗುರವಾಗಿ ಮಾತನಾಡುವುದು ಅಕ್ಷಮ್ಯ. ಅಂಬೇಡ್ಕರ್ ಅವರನ್ನು ವಿರೋಧಿಸುವ ಮನೋಭಾವದ ಹಿಂದೆ ಅವರ ವಿಚಾರಧಾರೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳ ಮೇಲಿನ ವಿರೋಧವೂ ಇದೆ” ಎಂದು ಆರೋಪಿಸಿದರು.

“ಅಂಬೇಡ್ಕರ್ ಅವರನ್ನು ವಿರೋಧಿಸುವವರು ಕೇವಲ ಒಬ್ಬ ವ್ಯಕ್ತಿಯನ್ನು ವಿರೋಧಿಸುತ್ತಿಲ್ಲ. ಅವರ ವಿಚಾರಧಾರೆ, ಸಾಮಾಜಿಕ ನ್ಯಾಯದ ಆಶಯ ಹಾಗೂ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು ಹಾಗೂ ಕುವೆಂಪು ಅವರ ಚಿಂತನೆಗಳು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ. ಇಂತಹ ವಿಚಾರಧಾರೆಗಳು ಕೆಲವರಿಗೆ ‘ಡಿಸ್ಟರ್ಬ್’ ಆಗುತ್ತವೆ ಎಂದು ಪ್ರಕಾಶ್ ರೈ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್...

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...