ಯಾದಗಿರಿ | ನಗರ ರಸ್ತೆ ಸರಿಪಡಿಸಿ, ಹಂಪ್ಸ್‌ ಅಳವಡಿಕೆಗೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

Date:

ಯಾದಗಿರಿ ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಹೆಚ್ಚಾಗುತ್ತಿರುವ ಗುಂಡಿಗಳು ಮತ್ತು ಹಂಪ್ಸ್‌ ಇಲ್ಲದಕ್ಕೆ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು, ಕೂಡಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.

- Advertisement -

ಸಮಿತಿಯ ಜಿಲ್ಲಾಧ್ಯಕ್ಷ ರಾಹುಲ್ ಕೊಲ್ಲೂರಕರ್ ಮಾತನಾಡಿ, ‘ಯಾದಗಿರಿ ನಗರದಲ್ಲಿ ಅನೇಕ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ನಾಗರಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಹಿರಿಯರು ದಿನನಿತ್ಯ ಜೀವಭಯದಲ್ಲಿ ಸಂಚರಿಸುವಂತಾಗಿದೆ. ಹೊಸ ಬಸ್ ನಿಲ್ದಾಣ ಎದುರುಗಡೆ, ಹೊಸಳ್ಳಿ ಕ್ರಾಸ್, ಸೈದಾಪೂರ ಹೋಟೆಲ್ ಎದುರು, ಬಸವೇಶ್ವರ ಗಂಜ್, 1ನೇ ಮತ್ತು 2ನೇ ಗೇಟ್ ಪ್ರದೇಶಗಳಲ್ಲಿ ಹಂಪ್ಸ್‌ ತಕ್ಷಣ ಅಳವಡಿಸಬೇಕು. ಹೊಸಳ್ಳಿ ರಸ್ತೆ ಚರ್ಚ್ ಎದುರು ಹಾಗೂ ಜೆಸ್ಕಾಂ ಕ್ವಾಟರ್ಸ್ ಬಳಿಯ ಗುಂಡಿಗಳನ್ನು ಕೂಡಲೇ ಮುಚ್ಚಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ʼನಗರದ ಹಲವು ಭಾಗಗಳಲ್ಲಿ ಹಂಪ್ಸ್‌ ಕೊರತೆಯಿಂದ ಬೃಹತ್ ಲಾರಿ, ಟಿಪ್ಪರ್‌ಗಳು ಮತ್ತು ಬೈಕ್‌ಗಳು ವೇಗವಾಗಿ ಸಂಚರಿಸುತ್ತಿದ್ದು, ಶಾಲೆಗೆ ಹೋಗುವ ಮಕ್ಕಳಿಗೆ ಅಪಘಾತ ಸಂಭವಿಸುವ ಆತಂಕ ಹೆಚ್ಚಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ರಾಜಾ ವೆಂಕಟಪ್ಪ ನಾಯಕ ಚೌಕ್‌ಗೆ ಎಲ್‌ಇಡಿ, ಮ್ಯೂಸಿಯಂ ಲೈಟ್ ಅಳವಡಿಸಲು ಮನವಿ

ಮನವಿಗೆ ಸ್ಪಂದಿಸಿ ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಲೋಕೋಪಯೋಗಿ ಇಲಾಖೆಯ ಕಚೇರಿ ಮುಂದೆ ನಿರಂತರ ಹೋರಾಟ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡ ಕಾಶಿನಾಥ ಕಣೇಕಲ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...