ಯಾದಗಿರಿ | ಮಹಿಳಾ ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

Date:

ಮಹಿಳಾ ಮೀಸಲಾತಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಬೇರ್ಪಡಿಸಿ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿದ ಬಳಿಕ ಒಕ್ಕೂಟದ ಪದಾಧಿಕಾರಿಗಳು ಮಾತನಾಡಿ, ‘ಮಹಿಳಾ ಮೀಸಲಾತಿ ಕಾಯ್ದೆ ಎಂದು ಕರೆಯಲಾಗುವ ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆ-2023 ಮಹಿಳೆಯರ ರಾಜಕೀಯ ಪ್ರಾತಿನಿಧ್ಯವನ್ನು ಖಚಿತಪಡಿಸುವ ಐತಿಹಾಸಿಕ ಹೆಜ್ಜೆಯಾಗಿದ್ದರೂ, ಅದರ ಅನುಷ್ಠಾನವನ್ನು ಮುಂದಿನ ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಜೋಡಿಸಿರುವುದರಿಂದ ಮಹಿಳೆಯರ ಸಾಂವಿಧಾನಿಕ ಹಕ್ಕು ವಿಳಂಬವಾಗುತ್ತಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

‘ಸುಮಾರು ಮೂರು ದಶಕಗಳಿಂದ ಮಹಿಳೆಯರು ರಾಜಕೀಯ ಮೀಸಲಾತಿಗಾಗಿ ಕಾಯುತ್ತಿದ್ದು, 1996ರಲ್ಲಿ ಮಂಡನೆಯಾದ ಮೂಲ ಮಹಿಳಾ ಮೀಸಲಾತಿ ಮಸೂದೆ ಹಾಗೂ 2010ರಲ್ಲಿ ರಾಜ್ಯಸಭೆ ಅಂಗೀಕರಿಸಿದ್ದ ಮಸೂದೆಯಲ್ಲಿ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಷರತ್ತುಗಳಿರಲಿಲ್ಲ. ಬಳಿಕ ಸೇರಿಸಲಾದ ಈ ಷರತ್ತುಗಳನ್ನು ತೆಗೆದುಹಾಕಿ ಅಗತ್ಯ ಸಾಂವಿಧಾನಿಕ ತಿದ್ದುಪಡಿ ತರಬೇಕು. ಮುಂಬರುವ ಚುನಾವಣೆಗಳಿಂದಲೇ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಅವರು ಒತ್ತಾಯಿಸಿದರು.

‘ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಮಹಿಳಾ ಮೀಸಲಾತಿಯನ್ನು ಬೇರ್ಪಡಿಸುವುದು, ಅದಕ್ಕೆ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿ ತರುವುದು ಹಾಗೂ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬಸ್ ಪಲ್ಟಿ: 34ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟದ ಕಲಬುರಗಿ ಜಿಲ್ಲಾ ಅಧ್ಯಕ್ಷೆ ಹಾಗೂ ಯಾದಗಿರಿ ಪ್ರಭಾರಿ ಪದ್ಮನಿ ಕಿರಣಗಿ, ಉಪಾಧ್ಯಕ್ಷೆ ಸುಮಿತ್ರ ಗೋಡಿಕರ್, ಯರಗೋಳ ಘಟಕದ ಅಧ್ಯಕ್ಷೆ ಪದ್ಮಾವತಿ, ಮೀನಾಕ್ಷಿ, ವಿಜಯಲಕ್ಷ್ಮಿ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...