ಯಾದಗಿರಿ | ದಲಿತರ ಮೇಲೆ ಹಲ್ಲೆ; ಪೊಲೀಸ್‌ ಠಾಣೆಗೆ ಮುತ್ತಿಗೆ

Date:

Advertisements

ಯಾದಗಿರಿ ಜಿಲ್ಲೆಯ ಬೋನಾಳ ಗ್ರಾಮದ ದಲಿತ ಸಮುದಾಯದ ಶಾಂತಾ ಪರಮಣ್ಣ ದೊಡ್ಡಮನಿ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಸಾಮೂಹಿಕ ದಲಿತ ಸಂಘಟನೆಗಳ ಒಕ್ಕೂಟದಿಂದ ಸುರಪುರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಡಿವೈಎಸ್ಪಿಗೆ ಮನವಿ ಸಲ್ಲಿಸಿದರು.

ಸುರಪುರ ನಗರದ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಅನೇಕ ಮುಖಂಡರು ಮಾತನಾಡಿದರು.

ಬೋನಾಳ ಗ್ರಾಮದ ದಲಿತ ಸಮುದಾಯದ ಭೀಮಪ್ಪ ಸಾಬಪ್ಪ ದೊಡ್ಡಮನಿ 1987ರಲ್ಲಿ ಜಮೀನು ಖರಿದಿಸಿದ್ದು, ಬಾಚಿಮಟ್ಟಿ ಗ್ರಾಮದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿಯವರು ತಮ್ಮ ರಾಜಕೀಯ ಪ್ರಭಾವ ಬಳಸಿ ಉಪ ನೋಂದಣಾಧಿಕಾರಿಗಳ ಕಚೇರಿ ಮೂಲಕ ಆಕ್ರಮವಾಗಿ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿದ್ದು, 2024ರ ಡಿಸೆಂಬರ್ 23 ರಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಶಾಂತಾ ಪರಮಣ್ಣ ದೊಡ್ಡಮನಿ ಮತ್ತಿತರರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದರು. ದೂರಿನನ್ವಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸರಿಯಾಗಿ ವಿಚಾರಣೆ ಮಾಡದೆ ಏಕಾಏಕಿ ದಲಿತರನ್ನು ಬಂಧಿಸಿರುವುದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜೆಜೆ‌ಎಂ ಕಾಮಗಾರಿ ವಿಳಂಬ; ಶಕಲಾಸಪಲ್ಲಿ ಗ್ರಾಮಸ್ಥರ ಆಕ್ರೋಶ

“ಪೋಲಿಸರು ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೂಳಗಾಗಿ ದಲಿತರ ಮೇಲೆ ಕ್ರಮ ಕೈಗೊಂಡಿದ್ದು, ಹಲ್ಲೆ ಹಾಗೂ ಜಾತಿ ನಿಂದನೆ ಮಾಡಿದವರ ಮೇಲೆ ಈವರೆಗೆ ಯಾವುದೇ ರೀತಿಯ ಕಾನೂನು ಕ್ರಮ ಕೈಕೊಂಡಿಲ್ಲ. ಕನಿಷ್ಠ ಪಕ್ಷ ಜಾತಿ ನಿಂದನೆ ಮಾಡಿರುವವರನ್ನು ಠಾಣೆಗೆ ಕರೆಸಿ ವಿಚಾರಣೆಯನ್ನೂ ಮಾಡಿಲ್ಲ” ಎಂದು ದಲಿತ ಸಂಘಟನಾಕಾರರು ಆರೋಪಿಸಿದರು.

“ಒಂದು ವೇಳೆ ದಲಿತರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸದಿದ್ದಲ್ಲಿ ಏಪ್ರಿಲ್ 9ರಂದು ಸಂಪೂರ್ಣವಾಗಿ ಸುರಪುರ ಬಂದ್ ಮಾಡುವ ಮೂಲಕ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಹಣಮಂತಪ್ಪ ಕಾಕರಗಲ್‌, ನಿಂಗಣ್ಣ ಎಂ ಗೋನಾಳ್‌, ಮಾನಪ್ಪ ಶಳ್ಳಿಗಿ, ನಿಂಗಪ್ಪ ಕನ್ನಳ್ಳಿ, ಭೀಮಣ್ಣ ಅಡ್ಡೂಡಗಿ, ಮಲ್ಲಪ್ಪ ಕೋಟೆ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X