ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

Date:

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ ಪಾಲನೆ ಕುರಿತು ಪ್ಯಾನೆಲ್ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

- Advertisement -

ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಕೆ. ಮಲ್ಲಪ್ಪ, ಆಯಿಷ್ ಪರ್ವಿನ್ ಜಮಖಂಡಿ ಹಾಗೂ ಶಿವಕುಮಾರ ಫಿರಂಗಿ ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಚಾಲನಾ ಪರವಾನಗಿ ಹೊಂದಿರಬೇಕು ಹಾಗೂ ಪ್ರತಿಯೊಂದು ವಾಹನಕ್ಕೂ ಕಡ್ಡಾಯವಾಗಿ ವಿಮೆ ಮಾಡಿಸಿರಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳ ಸಂದರ್ಭದಲ್ಲಿ ಜೀವಹಾನಿ ಹಾಗೂ ಆರ್ಥಿಕ ನಷ್ಟವನ್ನು ತಡೆಯಲು ಸಾಧ್ಯವಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಂತಹ ಅಪಾಯಕಾರಿ ವರ್ತನೆಗಳಿಂದ ದೂರವಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸಲಹೆ ನೀಡಿದರು.

ಅಪ್ರಾಪ್ತರಿಗೆ ವಾಹನ ನೀಡದಿರಿ

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪಾಲಕರು ಯಾವುದೇ ಕಾರಣಕ್ಕೂ ವಾಹನ ಚಲಾಯಿಸಲು ಅವಕಾಶ ನೀಡಬಾರದು. ಅಪ್ರಾಪ್ತರು ವಾಹನ ಚಲಾಯಿಸುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಇದರಿಂದ ಮಕ್ಕಳ ಜೀವಕ್ಕೆ ಅಪಾಯವಾಗುವುದರ ಜತೆಗೆ ಪಾಲಕರಿಗೂ ಕಾನೂನು ಕ್ರಮ ಎದುರಾಗಬಹುದು ಎಂದು ಜಾಗೃತಿ ಮೂಡಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ವಾಹನ ಸವಾರರು ತಮ್ಮ ಹಾಗೂ ಇತರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...