ಯಾದಗಿರಿ | ಮಕ್ಕಳ ಹಕ್ಕು, ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

Date:

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಹಾಗೂ ಮಕ್ಕಳ ಹಕ್ಕುಗಳು, ಸುರಕ್ಷತೆ ಮತ್ತು ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಭಾನುವಾರ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರ್ಕರ್, ‘ಮಕ್ಕಳ ಸುರಕ್ಷತೆ ಮತ್ತು ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ಕುಟುಂಬ, ಶಾಲೆ ಹಾಗೂ ಸಮಾಜದ ಎಲ್ಲರೂ ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

‘ಮಕ್ಕಳ ಮೇಲೆ ದೈಹಿಕ, ಮಾನಸಿಕ ಹಾಗೂ ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ರೀತಿಯ ಶೋಷಣೆ ನಡೆಯದಂತೆ ತಡೆಯುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಪೋಕ್ಸೊ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಕ್ಕಳಿಗೆ ಯಾವುದೇ ಅಪಾಯ ಎದುರಾದರೆ ತಕ್ಷಣವೇ ಪೋಷಕರು, ಶಿಕ್ಷಕರು ಅಥವಾ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳು ಜಾಗೃತಿ ಗೀತೆ, ಕಿರು ನಾಟಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯವಿವಾಹ, ಮಕ್ಕಳ ಹಕ್ಕುಗಳು ಹಾಗೂ ಸುರಕ್ಷತೆ ಕುರಿತು ಅರಿವು ಮೂಡಿಸಿದರು. ಮಕ್ಕಳ ಪ್ರದರ್ಶನಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಯಿತು.
ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ವಿತರಿಸಿ ಸತ್ಕರಿಸಲಾಯಿತು. ಇದೇ ಸಂದರ್ಭದಲ್ಲಿ ಜಾಸ್‌ವ ಕಾರ್ಯಕ್ರಮದ ಸಂಯೋಜಕರು ಚೆನ್ನೈನಿಂದ ಆಗಮಿಸಿ ಮಕ್ಕಳೊಂದಿಗೆ ಸಂವಾದ ನಡೆಸಿ, ಮಕ್ಕಳ ಸುರಕ್ಷತೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಹೊಸಮನಿ, ಸೌಂದರ್ಯ, ಶರಣಪ್ಪ ಟೀಪ್ಪೆದರ್, ಅಯ್ಯಪ್ಪ ಆಟೋ, ನಿಕಾಯಲ್, ರಾಬರ್ಟ್ ದೊಡ್ಡಮನಿ, ಮಾರುತಿ ಚವಾಣ್, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿ, ಮಕ್ಕಳು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ₹10 ಲಕ್ಷ ವೆಚ್ಚದ ಸಿಸಿ ರಸ್ತೆ ಉದ್ಘಾಟಿಸಿದ ಶಾಸಕ ಅಲ್ಲಮಪ್ರಭು ಪಾಟೀಲ್

ಕಾರ್ಯಕ್ರಮವು ಮಕ್ಕಳ ಸುರಕ್ಷಿತ, ಆರೋಗ್ಯಕರ ಹಾಗೂ ಸಂತೋಷದಾಯಕ ಬಾಲ್ಯ ನಿರ್ಮಾಣಕ್ಕೆ ಸಮಾಜದ ಎಲ್ಲರೂ ಕೈಜೋಡಿಸಬೇಕೆಂಬ ಸಂದೇಶದೊಂದಿಗೆ ಯಶಸ್ವಿಯಾಗಿ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...