ಯಾದಗಿರಿ | ಭಗತ್ ಸಿಂಗ್ ಜನ್ಮ ದಿನಾಚರಣೆ; ಸಮಾಜವಾದಿ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪ

Date:

ಸಮಸಮಾಜದ ಕನಸನ್ನು ಕಾಣುತ್ತಾ, ಜಾತಿ-ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕೆಂದು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿ ನಗುನಗುತ್ತಾ ಗಲ್ಗಂಬವನ್ನೇರಿದ ಭಗತ್ ಸಿಂಗ್ ಪ್ರಸ್ತುತ ವಿದ್ಯಾರ್ಥಿಗಳ ಹಾಗೂ ಯುವಜನರಿಗೆ ಆದರ್ಶವಾಗಿದ್ದಾರೆ ಎಂದು ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ ಕೆ ಹೇಳಿದರು.

ಧೀರ ಹುತಾತ್ಮ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಯಾದಗಿರಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪ್ರಸ್ತುತ ಜನರ ಜ್ವಲ್ಪಂತ ಸಮಸ್ಯೆಗಳಾದ ಶಿಕ್ಷಣ ವ್ಯಾಪಾರೀಕರಣ, ನಿರುದ್ಯೋಗ, ಜಾತಿ ಹಾಗೂ ಕೋಮು ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಭಗತ್ ಸಿಂಗ್ ಅವರ ವಿಚಾರಗಳು ಸ್ಫೂರ್ತಿಯಾಗಬೇಕಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಭಗತ್‌ ಸಿಂಗ್‌ ಜನ್ಮದಿನಾಚರಣೆ

ಜಿಲ್ಲೆಯಲ್ಲಿ ಇಂದು ಹಲವು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಭಗತ್ ಸಿಂಗ್ ಜನ್ಮದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲಾಯಿತು. ಭಗತ್ ಸಿಂಗ್ ಅವರ ಜೀವನ ಸಂಘರ್ಷ ಹಾಗೂ ವಿಚಾರಗಳನ್ನು ಸ್ಫೂರ್ತಿಯಾಗಿಸಿಕೊಂಡು ಅವರ ಕನಸಿನ ಸಮಾಜವಾದಿ ಭಾರತವನ್ನು ಕಟ್ಟಲು ವಿದ್ಯಾರ್ಥಿಗಳು ಸಂಕಲ್ಪವನ್ನು ತೆಗೆದುಕೊಂಡರು.

ಈ ಸಂದರ್ಭದಲ್ಲಿ ಎಐಡಿಎಸ್‌ಒ ಸದಸ್ಯರು, ವಿದ್ಯಾರ್ಥಿಗಳಾದ ಶೋಭಾ, ಭವಾನಿ, ಅನುರಾಧ, ಭೀಮಮ್ಮ, ಲಕ್ಷ್ಮೀ, ಪದ್ಮಾ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ರಾಕೇಶ್ ಹತ್ಯೆ; ಆರೋಪಿಗಳ ಬಂಧನಕ್ಕೆ ಆಗ್ರಹ

ಯಾದಗಿರಿಯಲ್ಲಿ ರಾಕೇಶ್ ಎಂಬ ಯುವಕನನ್ನು ಹತ್ಯೆಗೈದ ಆರೋಪಿ ಫಯಾಜ್ ಮತ್ತು ಆತನ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...