ಯಾದಗಿರಿ | ಭೀಮ್‌ ಆರ್ಮಿ ಸಂಘಟನೆ ಪದಾಧಿಕಾರಿಗಳ ಆಯ್ಕೆ

Date:

Advertisements

ತಳಮಟ್ಟದ ಸಮುದಾಯದ ಜನಾಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ದೌರ್ಜನ್ಯ ಸಾಮಾಜಿಕ ಬಹಿಷ್ಕಾರ ನಡೆತ್ತಲೇ ಇವೆ. ಇವುಗಳನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸರ್ಕಾರ ಸಂಪೂರ್ಣ ವಿಫಲವಾಗಿರುವುದರಿಂದ ಯಾದಗಿರಿ ಜಿಲ್ಲೆಯಲ್ಲಿ ಭೀಮ್ ಆರ್ಮಿ ಸಂಘಟನೆ ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಯಿತು ಎಂದು ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ಶರಣರೆಡ್ಡಿ ಹತ್ತಿಗೂಡುರ್‌ ತಿಳಿಸಿದರು.

ಯಾದಗಿರಿ ಜಿಲ್ಲೆಯ ಡಾ. ಎಸ್ ಬಿ ಕಾಮರೆಡ್ಡಿ ಕಾರ್ಯಾಲಯದಲ್ಲಿ ನೂತನ ಭೀಮ್ ಆರ್ಮಿ (ಭಾರತ ಏಕತಾ ಮಿಷನ್) ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಮಾತನಾಡಿದರು.

“ಮುಂಬರುವ ದಿನಗಳಲ್ಲಿ ಯಾದಗಿರಿ ಜಿಲ್ಲೆಯಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ರೈತರು, ಕಾರ್ಮಿಕರು, ಧ್ವನಿ ಇಲ್ಲದವರಿಗೆ ಧ್ವನಿಯಾಗಿ, ಸಮಾಜಮುಖಿ ಕಾರ್ಯಕ್ಕೆ ಸಂಘಟನೆಯ ಅವಶ್ಯಕತೆ ಇದೆ. ಸವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಸರ್ವ ಜನಾಂಗದ ಸಮಾನತೆ ಸಮಬಾಳು ಸಮಪಾಲು ಎಂಬಂತೆ ಆರ್ಥಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯವಾಗಿ ಸಮಾಜದ ಮುನ್ನೆಲೆಗೆ ಬರಲು ನಾವೆಲ್ಲರೂ ಒಗ್ಗೂಡಿ ಸಂಘಟನೆ ಕಟ್ಟಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ” ಎಂದು ತಿಳಿಸಿದರು.

Advertisements

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶೋಷಿತ ಸಮುದಾಯದವರು ರಾಜಕೀಯ ಅಧಿಕಾರಕ್ಕಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಸಮಾಜದ ಮಹಿಳೆಯರು, ಯುವಕರು ಸರ್ಕಾರದ ಸೌಲಭ್ಯ ಪಡೆದುಕೊಂಡು ಸಮಾಜದ ಮುನ್ನೆಲೆಗೆ ಬರಲು ಸಾಧ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ಆಚಾರ ವಿಚಾರಧಾರೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಏಳಿಗೆಗಾಗಿ ದುಡಿಯೋಣ” ಎಂದು ಕರೆ ಕೊಟ್ಟರು.

ರಾಷ್ಟ್ರೀಯ ಅಧ್ಯಕ್ಷ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ ನಾಯಕತ್ವ ಒಪ್ಪಿಕೊಂಡು ಭೀಮ್ ಆರ್ಮಿ ಗೋಪಾಲ್ ಡಿ‌ ಎಸ್ ಆದೇಶದ ಮೇರೆಗೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಜು ಅಣಬಿ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಮುಖಂಡರು ಕಾರ್ಯಕರ್ತರು ಸೇರಿ ಎಲ್ಲರ ಅಭಿಪ್ರಾಯ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮಣಿಪುರ ಘಟನೆ: ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ; ದಸಂಸ ಆಗ್ರಹ

ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಿದರು. ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷರಾಗಿ ಪ್ರಭು ಬುಕ್ಕಲ್, ಪ್ರಧಾನ ಕಾರ್ಯದರ್ಶಿ ಉಸ್ತುವಾರಿಯಾಗಿ ಶರಣರೆಡ್ಡಿ ಹತ್ತಿಗೂಡುರ್‌, ಉಪಾಧ್ಯಕ್ಷರಾಗಿ ಕಂಡಪ್ಪ ಅಯ್ಯಾಳ ಬಿ, ಮಾನಪ್ಪ ರಸ್ತಾಪುರ್, ಮಲ್ಲಿಕಾರ್ಜುನ್ ಯರಗೋಳ ಅವರನ್ನು ನೇಮಕ ಮಾಡಿದರು.

ಈ ಸಂದರ್ಭದಲ್ಲಿ ಮರ್ಲಿಂಗ ಬೆನಕನಹಳ್ಳಿ, ಅಂಬಲಪ್ಪ ರಸ್ತಾಪುರ್, ಮಡಿವಾಳಪ್ಪ ಅಣಬಿ, ವಸಂತ ಮ್ಯಾಗೇರಿ, ವಿಶಾಲ ಅಣಿಬಿ, ಸಿದ್ದು ಯಾದಗಿರಿ, ಬಸು ನಟೇಕರ್, ಮಲ್ಲಣ್ಣ ಮಾಗನೂರು, ಪರಶುರಾಮ್ ಚಲವಾದಿ, ಶರಣು ಗ್ಯಾಂಗಿನ್, ಬಸಲಿಂಗಪ್ಪ ಶಿರವಾಳ, ದೇವಪ್ಪ ಪೂಜಾರಿ, ಶರಣು ಶಿರವಾಳ, ಮಲ್ಲಿಕಾರ್ಜುನ್ ಹೊಸಮನಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X