ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಸಾಂಸ್ಕೃತಿಕ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಭೀಮಾಶಂಕರ ಎಂ. ಯರಗೊಳ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ಜೆ.ಪಿ. ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಾಂಸ್ಕೃತಿಕ ವಿಭಾಗದ ರಾಜ್ಯಾಧ್ಯಕ್ಷ ವಿರೇಶ ಪ್ರಸಾದ್ ಅವರು ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣರೆಡ್ಡಿ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನೇಮಕಾತಿ ಬಳಿಕ ಪ್ರತಿಕ್ರಿಯಿಸಿದ ಭೀಮಾಶಂಕರ ಯರಗೊಳ, ಪಕ್ಷವು ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದಾಗಿ ತಿಳಿಸಿದರು. ಜಿಲ್ಲೆಯಾದ್ಯಂತ ಸಾಂಸ್ಕೃತಿಕ ವಿಭಾಗವನ್ನು ಬಲಪಡಿಸುವ ಜತೆಗೆ ಪಕ್ಷದ ಕಾರ್ಯಕ್ರಮಗಳು ಮತ್ತು ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ತಮ್ಮನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಹಾಗೂ ರಾಜ್ಯಾಧ್ಯಕ್ಷ ವೀರೇಶಪ್ರಸಾದ ಅವರಿಗೆ ಭೀಮಾಶಂಕರ ಕೃತಜ್ಞತೆ ಸಲ್ಲಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಕೆಬಿಜೆಎನ್‌ಎಲ್ ಭೂಮಿ ಕಬಳಿಕೆ ಆರೋಪ; ಅಕ್ರಮ ಕಟ್ಟಡ ತೆರವಿಗೆ ಸಿದ್ದು ಪಟ್ಟೇದಾರ ಆಗ್ರಹ
ಪಕ್ಷದ ಹಿರಿಯರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ, ಜಿಲ್ಲೆಯಲ್ಲಿ ಸಾಂಸ್ಕೃತಿಕ ವಿಭಾಗದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಅವರು ಹೇಳಿದರು.




