ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಸುಭಾಷ್ ಸರ್ಕಲ್ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.
ಡಿಗ್ರಿ ಕಾಲೇಜು ರಸ್ತೆಯಿಂದ ಸುಭಾಷ್ ಸರ್ಕಲ್ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಅವರ ಎರಡೂ ಕಾಲುಗಳು ಮುರಿದಿವೆ. ತಲೆಗೆ ಕೂಡ ಗಂಭೀರ ಪೆಟ್ಟಾಗಿದ್ದು, ರಕ್ತಸ್ರಾವವಾಗಿರುವುದಾಗಿ ತಿಳಿದುಬಂದಿದೆ.
ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಕೂಡಲೇ ಗಾಯಾಳುವಿನ ನೆರವಿಗೆ ಧಾವಿಸಿ, ತುರ್ತು ಚಿಕಿತ್ಸೆಗೆ ಯಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು
This video cannot be played in your browser. Open the video directly
ಮಾಹಿತಿ ತಿಳಿದು ಸ್ಥಳಕ್ಕೆ ಯಾದಗಿರಿ ಸಂಚಾರಿ ಠಾಣೆಯ ಪಿಎಸ್‌ಐ ಗೀತಾ ಭದ್ರಾಪುರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಲಾರಿ ಮತ್ತು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿಕೊಂಡು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ಸಂಚಾರಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





