ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪುರಸಭೆಯಲ್ಲಿ ಬಿಜೆಪಿ ಬಹುಮತವನ್ನೂ ಹೊಂದಿದ್ದರೂ, ಅಧ್ಯಕ್ಷ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದೆ. ಬಿಜೆಪಿಗೆ ದೊರೆಯದ ಅಧ್ಯಕ್ಷ ಹುದ್ದೆಯನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ಕೆಂಭಾವಿ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿದ್ದು, ಬಿಜೆಪಿ 13 ಮತ್ತು ಕಾಂಗ್ರೆಸ್ 8 ಸದಸ್ಯರನ್ನು ಹೊಂದಿವೆ. ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. 13 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡಿದೆ. ಕಡಿಮೆ ಸದಸ್ಯರಿದ್ದೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದೆ.
ಪುರಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್ ರಹೀಮನ್ ಪಟೇಲ್ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರನ್ನು ಆಯ್ಕೆ ಮಾಡಲು ಕನಿಷ್ಠ 12 ಮತಗಳ ಅಗತ್ಯವಿತ್ತು. ಕಾಂಗ್ರೆಸ್ ಪಕ್ಷೇತರ ಸದಸ್ಯರನ್ನು ತನ್ನ ವಿಶ್ವಾಸಕ್ಕೆ ತೆಗೆದುಕೊಂಡಿದೆ. ಬಿಜೆಪಿ ಇಬ್ಬರು ಸದಸ್ಯರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.
ಅಧ್ಯಕ್ಷ ಸ್ಥಾನವನ್ನು ಗೆಲ್ಲುವಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಚಾಣಾಕ್ಷತೆ ಕೆಲಸ ಮಾಡಿದೆ ಎಂದು ಹೇಳಲಾಗುತ್ತಿದೆ.