ಯಾದಗಿರಿ | ಜಿಲ್ಲೆಯ ಶಾಸಕ, ಸಚಿವರು ಹೆಚ್ಚು ಭ್ರಷ್ಟರಾಗಿದ್ದಾರೆ: ಬಸವರಾಜ ವಿಭೂತಿಹಳ್ಳಿ

Date:

ರಾಜ್ಯದಲ್ಲಿರುವ ಬೇರೆ ಜಿಲ್ಲೆಯ ಶಾಸಕರಿಗಿಂತ ಯಾದಗಿರಿ ಜಿಲ್ಲೆಯ ಶಾಸಕ, ಸಚಿವರು ಅತಿ ಹೆಚ್ಚು ಭ್ರಷ್ಟರಾಗಿದ್ದಾರೆ. ದಿನನಿತ್ಯ ಸಂಚರಿಸುವ ಮುಖ್ಯ ರಸ್ತೆಗಳು ಗುಂಡಿ ಗುಂಡಿಯಾಗಿ ಹಾಳಾಗಿದ್ದರೂ ಅವರ ಗಮನಕ್ಕೆ ಬರುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ದೋರನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಹಾಪುರದಿಂದ ಯಾದಗಿರಿ ಹಾಗೂ ಕೊಡಗಂಲ್‌ಯಿಂದ ಸಿಂದಗಿ ಸಂಪರ್ಕಿಸುವ ರಾಜ್ಯ ಹೆದ್ದಾರಿಗಳು ಸೇರಿದಂತೆ ಬಹುತೇಕ ರಸ್ತೆಗಳು ಹಾಳಾಗಿವೆ. ಆದರೆ ಶಾಸಕ, ಸಚಿವರು ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ. ಇದರ ಪರಿಣಾಮ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಯುವ ನಾಯಕ ಮಹೇಶರಡ್ಡಿ ಮುತ್ನಾಳ ಮಾತನಾಡಿ, “ಅಧಿಕಾರ ಪಡೆಯುವ ಆಸೆಯಿಂದ ಕಾಂಗ್ರೆಸ್ ಪಂಚ ಗ್ಯಾರಂಟಿ ಘೋಷಿಸಿದರೂ, ಆ ಯೋಜನೆಗಳಿಗೆ ಹಣ ದೊರಕದೆ ಪರದಾಡುತ್ತಿದೆ. ಅವರಿಗೆ ರಾಜ್ಯದ ಅಭಿವೃದ್ದಿ ಬೇಡವಾಗಿದೆ” ಎಂದು ಟೀಕಿಸಿದರು.

ಅವರು ಇನ್ನೂ ಮುಂದುವರಿದು, ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಿ, ಎಕರೆಗೆ ರೂ.50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿದರು. 2023-24ನೇ ಸಾಲಿನ ರೂ.29 ಕೋಟಿ ಹಾಗೂ 2024-25ನೇ ಸಾಲಿನ ರೂ.326 ಕೋಟಿ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ವಿಮೆ ಇಲ್ಲದ ರೈತರನ್ನು ವಿಮಾ ವ್ಯಾಪ್ತಿಗೆ ತಂದು, ಸಾಲಮನ್ನಾ ಮಾಡಬೇಕೆಂದು ಡಿಟಿ ಸಂಗಮೇಶ ನಾಯಕರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

1002408415

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ, ಪ್ರಭುರಾಯ ಮಲಗೊಂಡ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ, ಶಿವಕುಮಾರ ಕೊಂಕಲ್‌, ಶರಣಗೌಡ ಹಬ್ಬಳ್ಳಿ, ಗೋವಿಂದಪ್ಪ ಕೊಂಚೆಟ್ಟಿ, ನಿಂಗಣ್ಣಗೌಡ ಪಾಟೀ, ಕಲ್ಲಪ್ಪ ಖಾನಾಪುರ, ಶಿವಾನಂದ ಗೋಲಗೇರಿ, ಖಾದರ್ ಜಮಾದಾರ, ಬಸವರಾಜ ಅನವಾರ, ಗುರುನಾಥ ಕಶೀಟ್ಟಿ, ಬಸವರಾಜ ಹುಡೇದ್, ಸಾಯಬಣ್ಣ ಹಲಗಿ, ಮಂಜುನಾಥ ಕಂಚಗಾರ, ವೆಂಕಟೇಶ ಕಶೇಟ್ಟಿ, ವಿರೇಶ ಕಂಬಾರ, ರವಿ ಪಾಲ್ಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...