ಯಾದಗಿರಿ | ವಿದ್ಯುತ್ ಕಂಬಕ್ಕೆ ಟಾಟಾ ಎಸಿ ಡಿಕ್ಕಿ: ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

Date:

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಎಸಿ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದೆ.

- Advertisement -

ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮಡ್ನಾಳ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು, ಕೆಲಸ ಮುಗಿಸಿಕೊಂಡು ಟಾಟಾ ಎಸಿ ವಾಹನದಲ್ಲಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಸಚಿವ ಡಾ.ಅಜಯಸಿಂಗ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಭೀಮರಾಯನಗುಡಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವುದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...