ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೊ ವಾಹನ ಪಲ್ಟಿಯಾದ ಪರಿಣಾಮವಾಗಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, 34ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದುರ್ಘಟನೆ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಸದಬ ಗ್ರಾಮದ ಬಳಿ ಭಾನುವಾರ ನಡೆದಿದೆ.
ಮೃತರನ್ನು ಕಲ್ಲದೇವನಹಳ್ಳಿ ಗ್ರಾಮದ ಲಕ್ಷ್ಮಿ(30) ಎಂದು ಗುರುತಿಸಲಾಗಿದೆ. ಎಲ್ಲರೂ ಒಂದೇ ವಾಹನದಲ್ಲಿ ಒಣ ಮೆಣಸಿನಕಾಯಿ ಬಿಡಿಸಲು ಕಲ್ಲದೇವನಹಳ್ಳಿ ಗ್ರಾಮದಿಂದ ಹೊರಟಿದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಈಜುಕೊಳದಲ್ಲಿ ಬಾಲಕಿ ಸಾವು ಪ್ರಕರಣ; 7 ಮಂದಿ ಬಂಧನ
ಗಾಯಗೊಂಡಿದ್ದ 34 ಜನರನ್ನು ಹುಣಸಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಗಂಭೀರ ಗಾಯಗೊಂಡಿರುವ 8 ಮಂದಿಯನ್ನು ವಿಜಯಪುರ, ಯಾದಗಿರಿ ಹಾಗೂ ಕಲಬುರಗಿ ಆಸ್ಪತ್ರೆಗೆ ರವಾನಿಸಿರುವುದಾಗಿ ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದ ಡಾ ರಶೀದ್ ಹಾಗೂ ಡಾ. ಉಮಾ ತಿಳಿಸಿದ್ದಾರೆ.