ಯಾದಗಿರಿ | ಬಸ್ ಕೊರತೆಗೆ ಬೇಸತ್ತ ಗಡಿಭಾಗದ ಜನ; ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಸಂಕಷ್ಟದ ಕಾಟ

Date:

ಯಾದಗಿರಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಬಸ್‌ಗಳು ಇಲ್ಲದ ಕಾರಣ ಜನರು ತುಂಬಿ ತುಳುಕುವ ಬಸ್‌ಗಳಲ್ಲಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಪಘಾತಗಳ ಭೀತಿ ಹೆಚ್ಚುತ್ತಿದೆ.

- Advertisement -

ಐನಾಪುರ, ಯಕ್ತಾಪುರ, ಚಿಂಚೋಳಿ, ವಂದಗನೂರ, ಆಲ್ದಾಳ, ಕಾಚಾಪುರ, ತಳ್ಳಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಬಸ್ ಸೇವೆ ಅತೀ ಕಡಿಮೆಯಾಗಿದೆ. ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

‘ಪ್ರತಿದಿನ ಒಂದೇ ಬಸ್‌ಗಾಗಿ ವಿದ್ಯಾರ್ಥಿಗಳು ಕಾಯಬೇಕಾಗುತ್ತಿದ್ದು, ಸೀಟು ಸಿಗದ ಕಾರಣ ಹಲವರು ನಿಂತುಕೊಂಡೇ ಪ್ರಯಾಣಿಸುತ್ತಿದ್ದಾರೆ. ಕೆಲವೊಮ್ಮೆ ಬಸ್‌ಗಳಲ್ಲಿ ಅತಿಯಾದ ಜನಸಂದಣಿ ಉಂಟಾಗಿ ಸುರಕ್ಷತೆಗೂ ಧಕ್ಕೆ ಉಂಟಾಗುತ್ತಿದೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುತ್ತದೆ. ಆದರೆ ಆ ಸಮಯದಲ್ಲಿ ಹೆಚ್ಚುವರಿ ಬಸ್ ಇಲ್ಲದ ಕಾರಣ ಪರದಾಡಬೇಕಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕನಿಷ್ಠ ಎರಡು ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು” ಎಂದು ವಿದ್ಯಾರ್ಥಿ ಭೀಮರಾಯ ಕುಂಬಾರ ಒತ್ತಾಯಿಸಿದ್ದಾರೆ.

‘ಇತ್ತೀಚೆಗೆ ನಡೆದ ಬಸ್ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆ ಕುರಿತ ಚರ್ಚೆ ಮತ್ತಷ್ಟು ಗಂಭೀರವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಾರಿಗೆ ಇಲಾಖೆ ಗಡಿಗ್ರಾಮಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಆರೋಪಿಗೆ 20 ವರ್ಷ ಶಿಕ್ಷೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸಾರ್ವಜನಿಕರ ಸುರಕ್ಷಿತ ಸಂಚಾರದ ಹಿತದೃಷ್ಟಿಯಿಂದ ಹೆಚ್ಚುವರಿ ಬಸ್ ಸೇವೆ ಆರಂಭಿಸಿ, ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಈ ಭಾಗದ ಜನರ ಪ್ರಮುಖ ಬೇಡಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...