ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ನಗರದ ಹೊರವಲಯದ ಆರಬೋಳ ಕಲ್ಯಾಣ ಮಂಟಪ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಶಹಾಪುರ ತಾಲೂಕಿನ ಚಾಮನಾಳ ತಾಂಡಾ ನಿವಾಸಿ ರಾಜು ಗುರುನಾಥ್ (31) ಹಾಗೂ ಸುರಪುರ ತಾಲೂಕಿನ ದಂಡಸೋಲಾಪುರ ಗ್ರಾಮದ ದೇವೇಂದ್ರ ಸುಭಾಷ್ (22) ಮೃತರು ಎಂದು ಗುರುತಿಸಲಾಗಿದೆ.
ಮೃತರಿಬ್ಬರು ಶಹಾಪುರ ನಗರದ ಮೈಕ್ರೋ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ರಾತ್ರೆ ತಮ್ಮ ಊರಿಗೆ ತೆರಳುವ ವೇಳೆ ಕಲಬುರಗಿಯಿಂದ ಶಹಾಪುರ ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ
ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.