ಜಿಲ್ಲೆಯಲ್ಲಿ ಯುವಕರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 2025 ನೇ ಸಾಲಿನಲ್ಲಿ ಆರ್ಮ್ಸ್ ಆ್ಯಕ್ಟ್ (Arms Act) 1959 ಅಡಿಯಲ್ಲಿ ಏಳು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಜಾತಿ, ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಯಾವುದೇ ತರಹದ ಪ್ರಚೋದಿತ ಪೋಸ್ಟ್ಗಳ ಮೇಲೆಯೂ ಸಹ ನಿಗಾ ವಹಿಸಿ ಜಿಲ್ಲೆಯಾದ್ಯಂತ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲು ಮಾಡಿಕೊಂಡು ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಸಾಮಾಜಿಕ ಜಾಲತಾಣದಲ್ಲಿ, ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಮಾರಕ ಆಯುಧಗಳನ್ನು ಹಿಡಿದು ಪೋಸ್ಟ್ ಮಾಡಬಾರದು, ಅದಲ್ಲದೆ ಜಾತಿ, ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ, ಧಾರ್ಮಿಕ ಭಾವನೆಗಳ ಧಕ್ಕೆ ತರುವಂತಹ, ಯಾವುದೇ ತರಹದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ ಹಂಚಿಕೊಳ್ಳುವುದು ಅಪರಾಧವಾಗಿದೆʼ ಎಂದು ಹೇಳಿದ್ದಾರೆ.