ವಿಚಾರಣೆಗೆ ಹಾಜರಾದ ವೇಳೆ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿ ಕಚೇರಿಯ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ದೂರು ಸಲ್ಲಿಸಲಾಗಿದೆ. ಘಟನೆ ನಡೆದಿರುವ ಕಚೇರಿಯಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಘಟನೆಯ ನೈಜತೆಯನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ ಬಂಧನ: ಕೊಲೆ ಪ್ರಕರಣ ದಾಖಲು
ಈ ಸಂದರ್ಭದಲ್ಲಿ ಸೊಪ್ಪಣ್ಣ ಹಳಿಸಗರ, ರೇಣುಕಾ ಎಚ್. ತಳವಾರ, ಜ್ಯೋತಿ, ಜಗದೇವಿ, ದೀಪ, ಭೀಮರಾಯ, ನಾಗರಾಜ, ಶಿವು, ಸುರೇಶ ಹಾಗೂ ಪರಶುರಾಮ ಸೇರಿದಂತೆ ಸಂಘದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.




