ಕಂದಾಯ ಇಲಾಖೆಯಿಂದ ಭಾನುವಾರ ಗುರುಮಠಕಲ್ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡುತ್ತಿರುವ ವೇಳೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರ ಅಭಿಮಾನಿಗಳು ʼಎಸ್ಎನ್‌ಕೆ, ಎಸ್‌ಎನ್‌ಕೆʼ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಕೆಲಹೊತ್ತು ಗಲಾಟೆ ನಡೆಯಿತು,
ಮಧ್ಯೆಪ್ರವೇಶಿಸಿದ ಗುರಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡಿಕೊಂಡ ಬೆನ್ನೆಲೆ ಕಾರ್ಯಕರ್ತರು ಶಾಂತವಾದರು. ಬಳಿಕ ಕಾರ್ಯಕ್ರಮ ಸುಸೂತ್ರವಾಗಿ ನಡೆಯಿತು.