ಯಾದಗಿರಿ | ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ಅಸ್ಪೃಶ್ಯತೆ ಖಂಡಿಸಿ ದಸಂಸ ಪ್ರತಿಭಟನೆ

Date:

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ, ಗೋಮೂತ್ರದಿಂದ ತೊಳೆದು ಹೋಮ-ಹವನ ನಡೆಸಿ ಶುದ್ಧೀಕರಿಸಿರುವ ಘಟನೆ ಖಂಡಿಸಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಸಂಸ ಮುಖಂಡರು, ಉತ್ತರಾಖಂಡದ ಅಲ್ಮಾನೀಯಾ ರಾಮಲಲ್ಲಾ ಮೈದಾನದಲ್ಲಿ ಆ.8ರಂದು ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕಾರ್ಯಕ್ರಮ ನಡೆದ ಎರಡು ದಿನಗಳ ಬಳಿಕ ಅಲ್ಲಿನ ಹಿಂದೂ ಸಂಘಟನೆಯ ಮುಖಂಡರು ಖರ್ಗೆ ಅವರು ಮಾತನಾಡಿದ ವೇದಿಕೆ ಅಪವಿತ್ರವಾಗಿದೆ ಎಂದು ಹೇಳಿ ಹೋಮ-ಹವನ, ಯಜ್ಞ ನಡೆಸಿ ಗಂಗಾಜಲ ಹಾಗೂ ಗೋಮೂತ್ರದಿಂದ ಸ್ಥಳವನ್ನು ಶುದ್ಧೀಕರಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕೃತ್ಯವು ಮೂಢನಂಬಿಕೆ ಮಾತ್ರವಲ್ಲದೆ ಜಾತಿ ಆಧಾರಿತ ಅಸ್ಪೃಶ್ಯತಾಚರಣೆಯಾಗಿದೆ. ಇದು ಒಬ್ಬ ವ್ಯಕ್ತಿಗೆ ಮಾಡಿದ ಅವಮಾನವಲ್ಲ, ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ದಸಂಸ ಮುಖಂಡರು ಆರೋಪಿಸಿದರು.

ಘಟನೆ ಕುರಿತು ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಸಂವಿಧಾನ ವಿರೋಧಿ ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಸತ್ತಿನಲ್ಲಿ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕು ಹಾಗೂ ಕೃತ್ಯ ಎಸಗಿದವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಯಿತು.

ಇದನ್ನು ಓದಿದ್ದೀರಾ? ಕಲಬುರಗಿ | ಮನೆ ಕಳ್ಳತನ: ₹26.81 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಜಪ್ತಿ

ದೇಶದ ಯಾವುದೇ ಭಾಗದಲ್ಲಿ ಜಾತಿ ಆಧಾರಿತ ಅಸ್ಪೃಶ್ಯತೆಗೆ ಅವಕಾಶ ನೀಡಬಾರದು. ಸಂವಿಧಾನದ ಆಶಯ ಹಾಗೂ ಸಮಾನತೆಯ ತತ್ವಗಳನ್ನು ರಕ್ಷಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ದಸಂಸ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ರಾಯಪ್ಪ ಸಾಲಿಮನಿ, ಚಂದ್ರಶೇಖರ ಹುಲಿಮನಿ, ಅಂಬ್ಲಪ್ಪ ರಸ್ತಾಪುರ, ಹರ್ಷವರ್ಧನ್, ಹಣಮಂತ, ಚಂದ್ರಶೇಖರ ಹತ್ತಿಗೂಡುರ, ಲಕ್ಷ್ಮಣ ಹಳಿಸಗರ, ರಾಘು ಹಂಚಿನಾಳ, ಅರ್ಜುನ, ದೇವರಾಜ, ನಾಗು, ಹಣಮಂತ, ಮಾನಪ್ಪ ಜೇಗ್ರಿ, ವಿಶ್ವ ಬಿದನೂರು, ಪ್ರವೀಣ ಹತ್ತಿಗೂಡುರ, ಹಣಮತಾಣ್ಣ, ವೆಂಕಟೇಶ, ಅರ್ಜುನ ಜಾಧವ್ ಇನ್ನಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...