ಯಾದಗಿರಿ | ಒಳಮೀಸಲಾತಿ ಸಮೀಕ್ಷೆ ನಮೂನೆಯಲ್ಲಿ ಧರ್ಮದ ಕಾಲಂ ಕೈಬಿಟ್ಟ ಆಯೋಗ : ದೇವೇಂದ್ರ ಹೆಗಡೆ

Date:

ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣಕ್ಕಾಗಿ ಸಮೀಕ್ಷೆ ಕೈಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗವು ಒಳಮೀಸಲಾತಿ ಸಮೀಕ್ಷಾ ನಮೂನೆಯನ್ನು ಬಿಡುಗಡೆ ಮಾಡಿದ್ದು, ನಮೂನೆಯಲ್ಲಿ ಧರ್ಮದ ಕಾಲಂ ಅನ್ನು ಕೈಬಿಡುವ ಮೂಲಕ ಸಮೀಕ್ಷೆಯ ಆರಂಭದಲ್ಲಿ ಸಂವಿಧಾನ ಆಶಯಗಳನ್ನು ಗಾಳಿಗೆ ತೂರಿದೆ ಎಂದು ಬೌದ್ಧ ದಾಖಲಾತಿ ಆಂದೋಲನ ಕರ್ನಾಟಕ ಘಟಕವು ಆರೋಪಿಸಿದೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೌದ್ಧ ದಾಖಲಾತಿ ಆಂದೋಲನದ ರಾಜ್ಯ ಪ್ರತಿನಿಧಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ, ‘ಈ ಸಂಬಂಧ ಬೌದ್ಧ ಸಮುದಾಯ ಸಂಘಟನೆಗಳು ನ್ಯಾಯಮೂರ್ತಿ ನಾಗಮೋಹನದಾಸ್ ಅವರನ್ನು ಭೇಟಿ ಮಾಡಿ ಧರ್ಮದ ಕಾಲಂ ಅನ್ನು ಸಮೀಕ್ಷೆಯಲ್ಲಿ ನಮೂದಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಆಯೋಗವು ಮನವಿಯನ್ನು ಪರಿಗಣಿಸಲ್ಲ. ಕ್ರೈಸ್ತ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರವಾದ ಪರಿಶಿಷ್ಟ ಜಾತಿಯ ಅಸ್ಪೃಶ್ಯ ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಧರ್ಮದ ಕಾಲಂ ಅನ್ನೇ ಕೈಬಿಡಲಾಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ದೇಶದಲ್ಲಿ ಈವರೆಗೆ ನಡೆದ ಎಲ್ಲ ಜಾತಿ ಜನಗಣತಿಯಲ್ಲೂ ಧರ್ಮದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಿ ಸಮೀಕ್ಷೆ ನಡೆಸಲಾಗಿದೆ. ಆದರೆ ಒಳಮೀಸಲಾತಿಯ ಸಮೀಕ್ಷೆಯ ಸಂದರ್ಭದಲ್ಲಿ ಧರ್ಮದ ಕಲಂ ಅನ್ನು ಕೈಬಿಟ್ಟಿರುವುದು ಸಂವಿಧಾನದ ಕಾಯ್ದೆ (ಪ್ರೆಸಿಡೆನ್ಸಿಯಲ್ ಆರ್ಡರ್) 1950,1956 ಹಾಗೂ 1990 ಸ್ಪಷ್ಟ ಉಲ್ಲಂಘನೆ’ ಎಂದು ಹೇಳಿದ್ದಾರೆ

‘ಬೌದ್ಧ ಧರ್ಮ ಸ್ವೀಕರಿಸಿದ ಪರಿಶಿಷ್ಟ ಜಾತಿಯ ಜನರನ್ನು ಬಲವಂತವಾಗಿ ಹಿಂದೂಗಳು ಎಂದು ಲೆಕ್ಕ ತೋರಿಸುವ ಸಂಘ ಪರಿವಾರದ ಯೋಜನೆಯೂ ಇದಾಗಿದೆ‌. ಡಾ. ಅಂಬೇಡ್ಕರ್ ಅವರ ಧಾರ್ಮಿಕ ಚಳವಳಿಯನ್ನು ಮಟ್ಟಹಾಕಲು ಮಾಡಿದ ಸಂಚು. ಇಂತಹ ಸಾಂವಿಧಾನಿಕ ವಂಚನೆಯನ್ನು ನಿಜವಾದ ಅಂಬೇಡ್ಕರ್ ಅನುಯಾಯಿಗಳು ಸಹಿಸಲು ಸಾಧ್ಯವಿಲ್ಲ. ಇದು ಖಂಡನೀಯ. ಹಾಗಾಗಿ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಅನ್ನು ಕಡ್ಡಾಯವಾಗಿ ನಮೂದಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಬೌದ್ಧ ಸಮುದಾಯದ ಮನವಿಗಳನ್ನು ಪರಿಗಣಿಸದ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಧರ್ಮದ ದಾಖಲೆಯ ಬಗ್ಗೆ ಅಸಡ್ಡೆ ತೋರಿರುವುದು ಅವರ ಪಕ್ಷಪಾತ ಧೋರಣೆ ಎತ್ತಿ ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಸಂವಿಧಾನ ವಿರೋಧಿ ನ್ಯಾಯಮೂರ್ತಿಗಳಿಂದ ಯಾವ ರೀತಿಯ ನ್ಯಾಯ ಸಿಗಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...